IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ RCB ಮಾಜಿ ನಾಯಕ ಎಂಟ್ರಿ

Updated on: Mar 01, 2025 | 7:58 AM

IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಐಪಿಎಲ್​ಗೆ ರಿಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಮೆಂಟರ್ ಆಗಿ. 2009 ರಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಪೀಟರ್ಸನ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾರ್ಗದರ್ಶಕರಾಗಿ ಆಯ್ಕೆಯಾಗಿದ್ದಾರೆ. ಅದರಂತೆ ಕೆಪಿ ಮುಂದಾಳತ್ವದಲ್ಲಿ ಈ ಬಾರಿ ಡೆಲ್ಲಿ ಪಡೆ ಭರ್ಜರಿ ಪ್ಲ್ಯಾನ್ ರೂಪಿಸಲಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ, ತಂಡಕ್ಕೆ ಹೊಸ ಮೆಂಟರ್​ನ ಆಯ್ಕೆ ಮಾಡಿಕೊಂಡಿದೆ‌. ಹೀಗೆ ಮೆಂಟರ್ ಆಗಿ ಎಂಟ್ರಿ ಕೊಟ್ಟವರು ಮಾತ್ಯಾರೂ ಅಲ್ಲ, ಆರ್​ಸಿಬಿ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್.

2 / 5
ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಐಪಿಎಲ್​ನಲ್ಲಿ ಆರ್​ಸಿಬಿ, ಡೆಲ್ಲಿ ಡೇರ್ ಡೆವಿಲ್ಸ್ (ಡೆಲ್ಲಿ ಕ್ಯಾಪಿಟಲ್ಸ್) ಹಾಗೂ ರೈಸಿಂಗ್ ಪುಣೆ ಜೈಂಟ್ಸ್ ಪರ ಕಣಕ್ಕಿಳಿದಿದ್ದರು. ಅಲ್ಲದೆ 2009 ರಲ್ಲಿ ಆರ್​ಸಿಬಿ ಹಾಗೂ 2014 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕರಾಗಿಯೂ ಕಾಣಿಸಿಕೊಂಡಿದ್ದರು.

3 / 5
ಇದೀಗ 11 ವರ್ಷಗಳ ಹಿಂದೆ ನಾಯಕರಾಗಿ ಕಾಣಿಸಿಕೊಂಡ ಫ್ರಾಂಚೈಸಿ ಪರವೇ ಮೆಂಟರ್ ಆಗಿ ರಿಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಅದರಂತೆ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ವೇಳೆ ಪೀಟರ್ಸನ್ ಡೆಲ್ಲಿ ಕ್ಯಾಪಿಟಲ್ಸ್ ಬಳಗದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ.

4 / 5
ಇನ್ನು ಐಪಿಎಲ್​ನಲ್ಲಿ 36 ಪಂದ್ಯಗಳನ್ನಾಡಿರುವ ಕೆವಿನ್ ಪೀಟರ್ಸನ್ 1 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 1001 ರನ್ ಕಲೆಹಾಕಿದ್ದಾರೆ. ಹಾಗೆಯೇ ಇಂಗ್ಲೆಂಡ್ ಪರ 37 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಅರ್ಧಶತಕಗಳೊಂದಿಗೆ ಒಟ್ಟು 1176 ರನ್ ಬಾರಿಸಿದ್ದಾರೆ. ಈ ಅನುಭವದೊಂದಿಗೆ ಪೀಟರ್ಸನ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅದೃಷ್ಟ ಬದಲಿಸಲಿದ್ದಾರಾ ಕಾದು ನೋಡಬೇಕಿದೆ.

5 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.