ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಆರಂಭಕ್ಕೂ ಮುನ್ನ ತಂಡಕ್ಕೆ ಹೊಸ ಮೆಂಟರ್ ಅನ್ನು ನೇಮಕ ಮಾಡಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಮುಂದಾಗಿದೆ. ಕಳೆದ ಸೀಸನ್ನಲ್ಲಿ ಕೆಕೆಆರ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ಟೀಮ್ ಇಂಡಿಯಾ ಕೋಚ್ ಆಗಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಹೊಸ ಮೆಂಟರ್ ಆಯ್ಕೆಗೆ ಮುಂದಾಗಿದೆ.