Kl Rahul: ದಾಖಲೆಗಳು ಧೂಳೀಪಟ… ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್
IPL 2025 LSG vs DC: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 40ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ (KL Rahul) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್ಗಳಲ್ಲಿ ಗುರಿ ತಲುಪಿ 8 ವಿಕೆಟ್ಗಳ ಜಯ ಸಾಧಿಸಿದೆ.
Updated on: Apr 23, 2025 | 7:54 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಕನ್ನಡಿಗ ಕೆಎಲ್ ರಾಹುಲ್ (KL Rahul) ಬ್ಯಾಟ್ನಿಂದ ಎಂಬುದು ವಿಶೇಷ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 40ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 159 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ 42 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 57 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಕೆಎಲ್ಆರ್ ಐಪಿಎಲ್ನಲ್ಲಿ 5000 ರನ್ ಪೂರೈಸಿದ್ದಾರೆ.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ವೇಗವಾಗಿ 5 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ಕೆಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸನ್ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರ ಹೆಸರಿನಲ್ಲಿತ್ತು.

ಐಪಿಎಲ್ನಲ್ಲಿ 184 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ 135 ಇನಿಂಗ್ಸ್ಗಳ ಮೂಲಕ 5000 ರನ್ ಕಲೆಹಾಕಿದ್ದರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 5 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್ ರಾಹುಲ್ ಯಶಸ್ವಿಯಾಗಿದ್ದಾರೆ. ಕೇವಲ 130 ಇನಿಂಗ್ಸ್ಗಳ ಮೂಲಕ ಕೆಎಲ್ ರಾಹುಲ್ 5000 ರನ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ವೇಗವಾಗಿ 5 ಸಾವಿರ ರನ್ಗಳ ಗಡಿದಾಟಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 159 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್ಗಳಲ್ಲಿ ಗುರಿ ತಲುಪುವ ಮೂಲಕ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.



















