KL Rahul: ಹಿಸ್ಟರಿ, ಹಿಸ್ಟರಿ, ಹಿಸ್ಟರಿ… ಐಪಿಎಲ್ನಲ್ಲಿ ಹೊಸ ಹಿಸ್ಟರಿ ನಿರ್ಮಿಸಿದ ಕೆಎಲ್ ರಾಹುಲ್
IPL 2025 DC vs GT: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 60ನೇ ಪಂದ್ಯದಲ್ಲಿ 2 ಶತಕಗಳು ಮೂಡಿಬಂದಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ ಶತಕ ಬಾರಿಸಿದ್ದರು. ಈ ಮೂಲಕ ಡಿಸಿ ಪಡೆ 20 ಓವರ್ಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ಸೆಂಚುರಿ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಗುಜರಾತ್ ಟೈಟಾನ್ಸ್ 200 ರನ್ಗಳ ಗುರಿ ಬೆನ್ನತ್ತಿ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೆಎಲ್ ರಾಹುಲ್ (KL Rahul) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಭರ್ಜರಿ ಸೆಂಚುರಿಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಹುಲ್ ಆಕರ್ಷಕ ಶತಕ ಬಾರಿಸಿದ್ದರು.
1 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ಆರ್ 65 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಅಜೇಯ 112 ರನ್ ಬಾರಿಸಿದರು. ಈ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೂರು ತಂಡಗಳ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯೊಂದು ಕನ್ನಡಿಗನ ಪಾಲಾಗಿದೆ.
2 / 5
ಅಂದರೆ ಐಪಿಎಲ್ನಲ್ಲಿ ಮೂರು ತಂಡಗಳ ಪರ ಕಣಕ್ಕಿಳಿದು ಶತಕ ಸಿಡಿಸಿರುವುದು ಕೆಎಲ್ ರಾಹುಲ್ ಒಬ್ಬರೇ. ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ 2 ಶತಕ ಬಾರಿಸಿದ್ದರು. 2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 64 ಎಸೆತಗಳಲ್ಲಿ 100 ರನ್ ಬಾರಿಸಿದ್ದ ಕೆಎಲ್ಆರ್, ಆ ಬಳಿಕ 2020 ರಲ್ಲಿ ಆರ್ಸಿಬಿ ವಿರುದ್ಧ 69 ಎಸೆತಗಳಲ್ಲಿ 132 ರನ್ ಸಿಡಿಸಿದ್ದರು.
3 / 5
ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದಿದ್ದ ರಾಹುಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 2 ಶತಕಗಳನ್ನು ಸಿಡಿಸಿದ್ದರು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 60 ಎಸೆತಗಳಲ್ಲಿ 103 ರನ್ ಬಾರಿಸಿದ್ದ ಕನ್ನಡಿಗ, ಆ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧವೇ ದ್ವಿತೀಯ ಪಂದ್ಯದಲ್ಲಿ 62 ಎಸೆತಗಳಲ್ಲಿ 103 ರನ್ ಚಚ್ಚಿದ್ದರು.
4 / 5
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ 112 ರನ್ ಬಾರಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೂರು ತಂಡಗಳ ಪರ ಶತಕ ಸಿಡಿಸಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೆಎಲ್ಆರ್ ತಮ್ಮದಾಗಿಸಿಕೊಂಡಿದ್ದಾರೆ.