- Kannada News Photo gallery Cricket photos IPL 2025: KL Rahul declines Delhi Capitals Captaincy offer
IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಿಗ್ ಆಫರ್ ತಿರಸ್ಕರಿಸಿದ ಕೆಎಲ್ ರಾಹುಲ್
KL Rahul: ಕೆಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಎರಡು ತಂಡಗಳನ್ನು ಮುನ್ನಡೆಸಿದ್ದಾರೆ. ಈ ಹಿಂದೆ ಪಂಜಾಬ್ ಕಿಂಗ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ರಾಹುಲ್, ಆ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾರಥ್ಯವಹಿಸಿಕೊಂಡಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗಿರುವ ಕನ್ನಡಿಗನಿಗೆ ಡಿಸಿ ಫ್ರಾಂಚೈಸಿ ಬಿಗ್ ಆಫರ್ ನೀಡಿದೆ.
Updated on: Mar 11, 2025 | 1:55 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಕ್ಕಾಗಿ 9 ಫ್ರಾಂಚೈಸಿಗಳು ತಮ್ಮ ತಂಡಗಳ ನಾಯಕರನ್ನು ಘೋಷಿಸಿದೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಯಾರಾಗಲಿದ್ದಾರೆ ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕನ್ನಡಿಗ ಕೆಎಲ್ ರಾಹುಲ್ಗೆ ನಾಯಕತ್ವ ನೀಡಲು ಆಸಕ್ತಿ ತೋರಿರುವ ವಿಚಾರ ಬಹಿರಂಗವಾಗಿದೆ.

ಆದರೆ ಕೆಎಲ್ ರಾಹುಲ್ ಈ ನಾಯಕತ್ವದ ಆಫರ್ ಅನ್ನು ನಯವಾಗಿ ತಿರಸ್ಕರಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಟಗಾರನಾಗಿ ಕೊಡುಗೆ ನೀಡಲು ಬಯಸುತ್ತೇನೆ. ನನಗೆ ಯಾವುದೇ ಹೆಚ್ಚುವರಿ ಜವಾಬ್ದಾರಿ ಬೇಡ ಎಂದು ರಾಹುಲ್ ಹೇಳಿದ್ದಾರೆ ಎಂದು ವರದಿಯಾಗಿದೆ.

ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಇನ್ನೂ ಕೂಡ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಮತ್ತೊಮ್ಮೆ ರಾಹುಲ್ ಅವರ ಮನವೊಲಿಸಲು ಮುಂದಾಗಬಹುದು. ಆದರೆ ಮತ್ತೊಮ್ಮೆ ಕೆಎಲ್ಆರ್ ನಾಯಕತ್ವವನ್ನು ನಿರಾಕರಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದೆ ಎರಡು ಆಯ್ಕೆಗಳಿವೆ.

ಇಲ್ಲಿ ಆಲ್ರೌಂಡರ್ ಆಗಿ ತಂಡದಲ್ಲಿ ಅಕ್ಷರ್ ಪಟೇಲ್ ಇದ್ದು, ಈ ಹಿಂದೆ ಕೆಲ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಹಾಗೆಯೇ ಅನುಭವಿ ನಾಯಕನಾಗಿ ಫಾಫ್ ಡುಪ್ಲೆಸಿಸ್ ಕೂಡ ಡೆಲ್ಲಿ ಪಡೆಯಲಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ನಾಯಕತ್ವ ಒಲ್ಲೆ ಎಂದರೆ, ಇವರಿಬ್ಬರಲ್ಲಿ ಒಬ್ಬರಿಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.



















