IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಿಗ್ ಆಫರ್ ತಿರಸ್ಕರಿಸಿದ ಕೆಎಲ್ ರಾಹುಲ್​

|

Updated on: Mar 11, 2025 | 1:55 PM

KL Rahul: ಕೆಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಎರಡು ತಂಡಗಳನ್ನು ಮುನ್ನಡೆಸಿದ್ದಾರೆ. ಈ ಹಿಂದೆ ಪಂಜಾಬ್ ಕಿಂಗ್ ತಂಡದ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ರಾಹುಲ್, ಆ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾರಥ್ಯವಹಿಸಿಕೊಂಡಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗಿರುವ ಕನ್ನಡಿಗನಿಗೆ ಡಿಸಿ ಫ್ರಾಂಚೈಸಿ ಬಿಗ್ ಆಫರ್ ನೀಡಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಕ್ಕಾಗಿ 9 ಫ್ರಾಂಚೈಸಿಗಳು ತಮ್ಮ ತಂಡಗಳ ನಾಯಕರನ್ನು ಘೋಷಿಸಿದೆ. ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಯಾರಾಗಲಿದ್ದಾರೆ ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಕನ್ನಡಿಗ ಕೆಎಲ್ ರಾಹುಲ್​ಗೆ ನಾಯಕತ್ವ ನೀಡಲು ಆಸಕ್ತಿ ತೋರಿರುವ ವಿಚಾರ ಬಹಿರಂಗವಾಗಿದೆ.

2 / 5
ಆದರೆ ಕೆಎಲ್ ರಾಹುಲ್ ಈ ನಾಯಕತ್ವದ ಆಫರ್​ ಅನ್ನು ನಯವಾಗಿ ತಿರಸ್ಕರಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಟಗಾರನಾಗಿ ಕೊಡುಗೆ ನೀಡಲು ಬಯಸುತ್ತೇನೆ. ನನಗೆ ಯಾವುದೇ ಹೆಚ್ಚುವರಿ ಜವಾಬ್ದಾರಿ ಬೇಡ ಎಂದು ರಾಹುಲ್ ಹೇಳಿದ್ದಾರೆ ಎಂದು ವರದಿಯಾಗಿದೆ.

3 / 5
ಇದಾಗ್ಯೂ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಇನ್ನೂ ಕೂಡ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಮತ್ತೊಮ್ಮೆ ರಾಹುಲ್ ಅವರ ಮನವೊಲಿಸಲು ಮುಂದಾಗಬಹುದು. ಆದರೆ ಮತ್ತೊಮ್ಮೆ ಕೆಎಲ್​ಆರ್​ ನಾಯಕತ್ವವನ್ನು ನಿರಾಕರಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದೆ ಎರಡು ಆಯ್ಕೆಗಳಿವೆ.

4 / 5
ಇಲ್ಲಿ ಆಲ್​ರೌಂಡರ್ ಆಗಿ ತಂಡದಲ್ಲಿ ಅಕ್ಷರ್ ಪಟೇಲ್ ಇದ್ದು, ಈ ಹಿಂದೆ ಕೆಲ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಹಾಗೆಯೇ ಅನುಭವಿ ನಾಯಕನಾಗಿ ಫಾಫ್ ಡುಪ್ಲೆಸಿಸ್ ಕೂಡ ಡೆಲ್ಲಿ ಪಡೆಯಲಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ನಾಯಕತ್ವ ಒಲ್ಲೆ ಎಂದರೆ, ಇವರಿಬ್ಬರಲ್ಲಿ ಒಬ್ಬರಿಗೆ ಕ್ಯಾಪ್ಟನ್ ಪಟ್ಟ ಸಿಗಲಿದೆ.

5 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.