IPL 2025: RCB ತಂಡಕ್ಕೆ ಕೆಎಲ್ ರಾಹುಲ್ ರಿಎಂಟ್ರಿ?

IPL 2025: ಕೆಎಲ್ ರಾಹುಲ್ ಐಪಿಎಲ್​ನಲ್ಲಿ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದಾದ ಬಳಿಕ ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಪರ ಆಡಿದ್ದ ರಾಹುಲ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ. ಆದರೆ ಮುಂಬರುವ ಮೆಗಾ ಹರಾಜಿಗೂ ಮುನ್ನ ಅವರು ಎಲ್​ಎಸ್​ಜಿ ತಂಡದಿಂದ ಹೊರಬರಲಿದ್ದಾರೆ ಎಂಬ ಸುದ್ದಿ ಮಹತ್ವ ಪಡೆದುಕೊಂಡಿದೆ.

|

Updated on: Jul 21, 2024 | 10:54 AM

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಐಪಿಎಲ್ (IPL 2025) ಸೀಸನ್ 18 ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಲಕ್ನೋ ತಂಡದಿಂದ ರಾಹುಲ್ ಹೊರಬರುವುದು ಬಹುತೇಕ ಖಚಿತವಾಗಿದ್ದು, ಅದರಂತೆ ಅವರು ಮುಂದಿನ ಆಕ್ಷನ್​ಗೆ ಹೆಸರು ನೀಡಲಿದ್ದಾರೆ ಎಂದು ದೈನಿಕ್ ಜಾಗರಣ್ ವರದಿ ಮಾಡಿದೆ.

1 / 7
ಈ ನಿರ್ಧಾರಕ್ಕೆ ಮುಖ್ಯ ಕಾರಣ, ಕಳೆದ ಬಾರಿಯ ಐಪಿಎಲ್​ ಪಂದ್ಯದ ವೇಳೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜಯ್ ಗೊಯೆಂಕಾ ಮೈದಾನದಲ್ಲೇ ಕೆಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು. ಈ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ರಾಹುಲ್ ಎಲ್​ಎಸ್​ಜಿ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದ್ದವು.

2 / 7
ಇದೀಗ ಈ ಸುದ್ದಿಯು ಮತ್ತೆ ಮುನ್ನಲೆಗೆ ಬಂದಿದ್ದು, ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗುಡ್ ಬೈ ಹೇಳುವುದು ಖಚಿತ ಎನ್ನಲಾಗುತ್ತಿದೆ. ಇದರ ಜೊತೆಗೆ ಕೆಎಲ್ ರಾಹುಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ.

3 / 7
ಕೆಎಲ್ ರಾಹುಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದು, ಈ ವೇಳೆ ಅವರನ್ನು ಖರೀದಿಸಲು ಆರ್​ಸಿಬಿ ಆಸಕ್ತಿ ಹೊಂದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಕೆಎಲ್​ಆರ್​ ಕಾಣಿಸಿಕೊಂಡರೆ, ಆರ್​ಸಿಬಿ ಪಾಲಾಗುವುದು ಖಚಿತ ಎನ್ನಲಾಗುತ್ತಿದೆ.

4 / 7
ಏಕೆಂದರೆ ಕೆಎಲ್ ರಾಹುಲ್ ಈ ಹಿಂದೆ ಆರ್​ಸಿಬಿ ಪರ ಉತ್ತಮ ಪ್ರದರ್ಶನ ನೀಡಿದ್ದರು. ಅಲ್ಲದೆ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಅವರ ಸ್ಥಾನ ತುಂಬಬಲ್ಲ ಆಟಗಾರನ ಅವಶ್ಯಕತೆ ಆರ್​ಸಿಬಿಗೆ ಇದೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿಯು ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

5 / 7
ಮತ್ತೊಂದೆಡೆ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್​ಗೆ ಈಗ 39 ವರ್ಷ. ಅಂದರೆ ಮುಂದಿನ ಸೀಸನ್ ವೇಳೆ ಅವರಿಗೆ 40 ವರ್ಷ ಆಗಿರಲಿದೆ. ಭವಿಷ್ಯದ ದೃಷ್ಟಿಯಿಂದ ಆರ್​ಸಿಬಿ ಈಗಲೇ ಹೊಸ ನಾಯಕನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆಯಿದೆ. ಇತ್ತ ಕೆಎಲ್ ರಾಹುಲ್ ಆಯ್ಕೆಯಿಂದ ಆರ್​ಸಿಬಿ ಈ ಎರಡು ಸ್ಥಾನಗಳನ್ನು ತುಂಬಬಹುದು. ಅಂದರೆ ನಾಯಕನಾಗಿ ಎರಡು ಬಾರಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಪ್ಲೇಆಫ್​ಗೆ ಕೊಂಡೊಯ್ದಿರುವ ಕೆಎಲ್ ರಾಹುಲ್​ ಈಗಾಗಲೇ ತಮ್ಮ ನಾಯಕತ್ವದ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಇದರ ಜೊತೆಗೆ ವಿಕೆಟ್ ಕೀಪರ್ ಆಗಿಯೂ ಐಪಿಎಲ್​ನಲ್ಲಿ ಮಿಂಚಿದ್ದಾರೆ.

6 / 7
ಹೀಗಾಗಿ ಕೆಎಲ್ ರಾಹುಲ್ ಆಯ್ಕೆಯಿಂದ ಆರ್​ಸಿಬಿ ವಿಕೆಟ್ ಕೀಪರ್ ಹಾಗೂ ನಾಯಕನ ಸ್ಥಾನವನ್ನು ತುಂಬಿಕೊಳ್ಳಬಹುದು. ಅದರಂತೆ ಐಪಿಎಲ್ 2025 ರಲ್ಲಿ ಕೆಎಲ್​ಆರ್​ ಆರ್​ಸಿಬಿಗೆ ಬಂದರೆ ಕ್ಯಾಪ್ಟನ್ ಪಟ್ಟದೊಂದಿಗೆ ಕಣಕ್ಕಿಳಿಯುವುದು ಖಚಿತ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ​ ಕೆಎಲ್ ರಾಹುಲ್ (KL Rahul) ಹೊಸ ಅಧ್ಯಾಯ ಶುರು ಮಾಡಲಿದ್ದಾರಾ ಕಾದು ನೋಡಬೇಕಿದೆ.

7 / 7
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್