AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೆಎಲ್ ರಾಹುಲ್​ಗೆ ಹೆಚ್ಚುವರಿ ಜವಾಬ್ದಾರಿ

IPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ. ಇತ್ತ ತಂಡದಲ್ಲಿರುವ ಅನುಭವಿ ಆಟಗಾರ ಫಾಫ್ ಡುಪ್ಲೆಸಿಸ್​ಗೆ ಉಪನಾಯಕನ ಪಟ್ಟ ನೀಡಲಾಗಿದೆ. ಹಾಗೆಯೇ ಮತ್ತೋರ್ವ ಅನುಭವಿ ದಾಂಡಿಗ ಕೆಎಲ್ ರಾಹುಲ್​ಗೆ ಮಧ್ಯಮ ಕ್ರಮಾಂಕದ ಜವಾಬ್ದಾರಿವಹಿಸಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on: Mar 19, 2025 | 7:34 AM

Share
ಐಪಿಎಲ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಎಲ್ಲಾ ತಂಡಗಳು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸುವಲ್ಲಿ ನಿರವಾಗಿದೆ. ಅತ್ತ ಆಡುವ ಬಳಗದ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕನ್ನಡಿಗ ಕೆಎಲ್ ರಾಹುಲ್​ಗೆ ಹೆಚ್ಚಿನ ಜವಾಬ್ದಾರಿ ವಹಿಸಲು ನಿರ್ಧರಿಸಿದೆ.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಪರ ಈ ಬಾರಿ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವುದಿಲ್ಲ. ತಂಡದಲ್ಲಿ ಸ್ಪೋಟಕ ಓಪನರ್​ಗಳಾಗಿ ಫಾಫ್ ಡುಪ್ಲೆಸಿಸ್ ಹಾಗೂ  ಜೇಕ್ ಫ್ರೇಸರ್-ಮೆಕ್‌ಗುರ್ಕ್ ಇದ್ದಾರೆ. ಹೀಗಾಗಿ ರಾಹುಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

2 / 5
ಇತ್ತೀಚೆಗೆ ಮುಗಿದ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೆಎಲ್ ರಾಹುಲ್ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್​ನೊಂದಿಗೆ ಟೀಮ್ ಇಂಡಿಯಾಗೆ ಗೆಲುವು ತಂದುಕೊಡುವಲ್ಲಿ ಅವರು ಯಶಸ್ವಿಯಾಗಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಮಧ್ಯಮ ಕ್ರಮಾಂಕದ ಜವಾಬ್ದಾರಿಯನ್ನು ಕೆಎಲ್​ಆರ್​ಗೆ ವಹಿಸಲು ನಿರ್ಧರಿಸಿದೆ.

3 / 5
ಈ ಹಿಂದೆ ಐಪಿಎಲ್​ನಲ್ಲಿ ಕೆಎಲ್ ರಾಹುಲ್ ಆರಂಭಿಕನಾಗಿ ಆಡಿದ್ದೇ ಹೆಚ್ಚು. ಆದರೆ ಡೆಲ್ಲಿ ಕ್ಯಾಪಿಟಲ್ಸ್​ ಪರ ಅಗ್ರ ಕ್ರಮಾಂಕಗಳಲ್ಲಿ ಕಣಕ್ಕಿಳಿಯಲು ಫಾಫ್ ಡುಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕರುಣ್ ನಾಯರ್​ನಂತಹ ಆಟಗಾರರಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ 4ನೇ ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಹ ಅವರೇ ನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

4 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.

5 / 5
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ

ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ

ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ

ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ

ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?

ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ