ಐಪಿಎಲ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಎಲ್ಲಾ ತಂಡಗಳು ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸುವಲ್ಲಿ ನಿರವಾಗಿದೆ. ಅತ್ತ ಆಡುವ ಬಳಗದ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕನ್ನಡಿಗ ಕೆಎಲ್ ರಾಹುಲ್ಗೆ ಹೆಚ್ಚಿನ ಜವಾಬ್ದಾರಿ ವಹಿಸಲು ನಿರ್ಧರಿಸಿದೆ.
ಪ್ರಸ್ತುತ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಪರ ಈ ಬಾರಿ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವುದಿಲ್ಲ. ತಂಡದಲ್ಲಿ ಸ್ಪೋಟಕ ಓಪನರ್ಗಳಾಗಿ ಫಾಫ್ ಡುಪ್ಲೆಸಿಸ್ ಹಾಗೂ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಇದ್ದಾರೆ. ಹೀಗಾಗಿ ರಾಹುಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
ಇತ್ತೀಚೆಗೆ ಮುಗಿದ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೆಎಲ್ ರಾಹುಲ್ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್ನೊಂದಿಗೆ ಟೀಮ್ ಇಂಡಿಯಾಗೆ ಗೆಲುವು ತಂದುಕೊಡುವಲ್ಲಿ ಅವರು ಯಶಸ್ವಿಯಾಗಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಮಧ್ಯಮ ಕ್ರಮಾಂಕದ ಜವಾಬ್ದಾರಿಯನ್ನು ಕೆಎಲ್ಆರ್ಗೆ ವಹಿಸಲು ನಿರ್ಧರಿಸಿದೆ.
ಈ ಹಿಂದೆ ಐಪಿಎಲ್ನಲ್ಲಿ ಕೆಎಲ್ ರಾಹುಲ್ ಆರಂಭಿಕನಾಗಿ ಆಡಿದ್ದೇ ಹೆಚ್ಚು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಪರ ಅಗ್ರ ಕ್ರಮಾಂಕಗಳಲ್ಲಿ ಕಣಕ್ಕಿಳಿಯಲು ಫಾಫ್ ಡುಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕರುಣ್ ನಾಯರ್ನಂತಹ ಆಟಗಾರರಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ 4ನೇ ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಹ ಅವರೇ ನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.