IPL 2025: ಕುಮಾರ ಸಂಗಕ್ಕಾರಗೆ ಬಲೆ ಬೀಸಿದ ಚಾಂಪಿಯನ್ ತಂಡ

Kumar Sangakkara: ಕುಮಾರ ಸಂಗಕ್ಕಾರ, ಹಾಲಿ ಐಪಿಎಲ್ ಚಾಂಪಿಯನ್ ಕೆಕೆಆರ್ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುತ್ತಿದ್ದು, ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವ ಗೌತಮ್ ಗಂಭೀರ್ ಬದಲಿಗೆ ಸಂಗಕ್ಕಾರ ಕೆಕೆಆರ್‌ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

|

Updated on:Sep 06, 2024 | 5:42 PM

2025 ರ ಐಪಿಎಲ್​ಗೂ ಮುನ್ನ ಎಲ್ಲಾ ತಂಡಗಳಲ್ಲೂ ಬದಲಾವಣೆಯ ಪರ್ವ ಆರಂಭವಾಗಿದೆ. ಹೊಸ ವಿಚಾರವೆಂಬಂತೆ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದ ಬಳಿಕ ಕನ್ನಡಿಗ ರಾಹುಲ್ ದ್ರಾವಿಡ್ ಇತ್ತೀಚೆಗಷ್ಟೇ ತಮ್ಮ ಹಳೆಯ ಫ್ರಾಂಚೈಸ್ ರಾಜಸ್ಥಾನ್ ರಾಯಲ್ಸ್​ ತಂಡವನ್ನು ಸೇರಿಕೊಂಡಿದ್ದರು.

1 / 6
ಇದೀಗ ದ್ರಾವಿಡ್ ಆಗಮನದ ನಂತರ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ನಿರ್ದೇಶಕ ಹುದ್ದೆಯಲ್ಲಿರುವ ಕುಮಾರ ಸಂಗಕ್ಕಾರ ಬೇರೆ ತಂಡವನ್ನು ಸೇರಿಕೊಳ್ಳಬಹುದು ಎಂಬ ಸುದ್ದಿ ಹರಿದಾಡಲಾರಂಭಿಸಿದೆ. ವರದಿಯೊಂದರ ಪ್ರಕಾರ, ಕುಮಾರ ಸಂಗಕ್ಕಾರ ಫ್ರಾಂಚೈಸಿಯನ್ನು ತೊರೆಯಲು ಯೋಚಿಸುತ್ತಿದ್ದಾರೆ ಎಂದು ಭಾರತದ ಮಾಜಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಹೇಳಿದ್ದಾರೆ ಎಂದು ವರದಿ ಮಾಡಿದೆ.

2 / 6
ವಿಕ್ರಮ್ ರಾಥೋಡ್ ಅವರ ಹೇಳಿಕೆಯ ಪ್ರಕಾರ, ಕುಮಾರ ಸಂಗಕ್ಕಾರ, ಹಾಲಿ ಐಪಿಎಲ್ ಚಾಂಪಿಯನ್ ಕೆಕೆಆರ್ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸುತ್ತಿದ್ದು, ಇತ್ತೀಚೆಗಷ್ಟೇ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವ ಗೌತಮ್ ಗಂಭೀರ್ ಬದಲಿಗೆ ಸಂಗಕ್ಕಾರ ಕೆಕೆಆರ್‌ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.

3 / 6
ಪ್ರಸ್ತುತ, ಕೆಕೆಆರ್ ಶಿಬಿರದಲ್ಲಿ ಅನೇಕ ಸಹಾಯಕ ಸಿಬ್ಬಂದಿ ಸೀಟುಗಳು ಖಾಲಿ ಇವೆ. ಗೌತಮ್ ಹೊರತಾಗಿ, ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಮತ್ತು ಫೀಲ್ಡಿಂಗ್ ಕೋಚ್ ರಿಯಾನ್ ಟೆನ್ ಡೋಸ್ಕೇಟ್ ಕೆಕೆಆರ್ ತೊರೆದು ಭಾರತೀಯ ಕೋಚಿಂಗ್ ವಿಭಾಗವನ್ನು ಸೇರಿಕೊಂಡಿದ್ದಾರೆ.

4 / 6
ಟೆಲಿಗ್ರಾಫ್ ವರದಿಯ ಪ್ರಕಾರ, ಕೆಕೆಆರ್ ಈಗ ಕುಮಾರ ಸಂಗಕ್ಕಾರ ಅವರೊಂದಿಗೆ ಮೆಂಟರ್ ಪಾತ್ರಕ್ಕಾಗಿ ಮಾತುಕತೆ ನಡೆಸುತ್ತಿದೆ. ಆದರೆ, ಕೆಕೆಆರ್ ಹೊರತಾಗಿ ಸಂಗಕ್ಕಾರ ಹಲವು ತಂಡಗಳಿಂದ ಆಫರ್‌ಗಳನ್ನು ಪಡೆದಿದ್ದಾರೆ. ಸದ್ಯ ಅಂತಿಮ ನಿರ್ಧಾರ ಇನ್ನಷ್ಟೇ ಬರಬೇಕಿದೆ.

5 / 6
ಹಲವು ವರ್ಷಗಳ ಕಾಲ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕತ್ವ ನಿರ್ವಹಿಸಿದ್ದ ಕುಮಾರ ಸಂಗಕ್ಕಾರ ಅವರು 2021 ರಲ್ಲಿ ರಾಜಸ್ಥಾನ ರಾಯಲ್ಸ್‌ ತಂಡಕ್ಕೆ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಅಧಿಕಾರವದಿಯಲ್ಲಿ ರಾಜಸ್ಥಾನ ತಂಡವು 2022 ರಲ್ಲಿ ಫೈನಲ್‌ಗೆ ತಲುಪಿತು. ಆದರೆ, ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಐಪಿಎಲ್ 2024ರಲ್ಲೂ ಪ್ಲೇಆಫ್‌ಗೇರಿದ್ದ ರಾಜಸ್ಥಾನ ತಂಡ ಎಲಿಮಿನೇಟರ್‌ನಲ್ಲಿ ಆರ್​ಸಿಬಿ ವಿರುದ್ಧ ಸೋಲಿನ ರುಚಿ ಅನುಭವಿಸಬೇಕಾಯಿತು.

6 / 6

Published On - 5:40 pm, Fri, 6 September 24

Follow us
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ

ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?

ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ

ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ

ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್

ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?

ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ

ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು

‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್

ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!