- Kannada News Photo gallery Cricket photos IPL 2025: LSG Bowler Mayank Yadav set to miss first half Of IPL
IPL 2025: 4 ಪಂದ್ಯ, 11 ಕೋಟಿ ರೂ: ಐಪಿಎಲ್ಗೆ ಟೀಮ್ ಇಂಡಿಯಾ ವೇಗಿ ಡೌಟ್..!
IPL 2025: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಯಾಂಕ್ ಯಾದವ್ ಕಳೆದ ಸೀಸನ್ನಲ್ಲಿ ಆಡಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಮ್ಯಾಚ್ಗಳಲ್ಲಿ 150 ಕಿ.ಮೀ ವೇಗದಲ್ಲಿ ಚೆಂಡೆಸೆದು ಗಮನ ಸೆಳೆದ ಮಯಾಂಕ್ ಅವರನ್ನು ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಬರೋಬ್ಬರಿ 11 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿದೆ. ಆದರೆ ಇದೀಗ ಅವರು ಐಪಿಎಲ್ ಸೀಸನ್-18 ರಲ್ಲಿ ಕಣಕ್ಕಿಳಿಯುವುದು ಡೌಟ್ ಎನ್ನಲಾಗಿದೆ.
Updated on: Mar 11, 2025 | 9:54 AM

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಗಾಯದ ಚಿಂತೆ ದೂರವಾಗಿಲ್ಲ. ಅದು ಸಹ ಕಳೆದ ಸೀಸನ್ ವೇಳೆ ಶುರುವಾದ ಗಾಯದ ಚಿಂತೆ. ಹೌದು, ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಮಯಾಂಕ್ ಯಾದವ್ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು.

ಹೀಗಾಗಿ ಮಯಾಂಕ್ ಯಾದವ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ 3 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಮತ್ತೆ ಗಾಯಗೊಂಡ ಕಾರಣ ಮಯಾಂಕ್ ಯಾದವ್ ಇದೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೀಗ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಮಯಾಂಕ್ ಯಾದವ್ ಮುಂಬರುವ ಐಪಿಎಲ್ನ ಮೊದಲಾರ್ಧದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ಆಡಲಿರುವ ಮೊದಲ 7 ಪಂದ್ಯಗಳಲ್ಲಿ ಮಯಾಂಕ್ ಕಾಣಿಸಿಕೊಳ್ಳುವುದಿಲ್ಲ.

ಆ ಬಳಿಕ ಅವರು ಸಂಪೂರ್ಣ ಗುಣಮುಖರಾಗಿ ಎನ್ಸಿಎ ಕಡೆಯಿಂದ ಫಿಟ್ನೆಸ್ ಸರ್ಟಿಫಿಕೇಟ್ ಲಭಿಸಿದರೆ ಮಾತ್ರ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಪೀಡ್ಸ್ಟರ್ ಮಯಾಂಕ್ ಯಾದವ್ ಕಣಕ್ಕಿಳಿಯುವುದು ಅನುಮಾನ ಎನ್ನಬಹುದು.

ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್ (ನಾಯಕ), ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಆಯುಷ್ ಬದೋನಿ, ರಿಷಭ್ ಪಂತ್, ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ಅವೇಶ್ ಖಾನ್, ಅಬ್ದುಲ್ ಸಮದ್, ಆರ್ಯನ್ ಜುಯಲ್, ಆಕಾಶ್ ದೀಪ್, ಹಿಮ್ಮತ್ ಸಿಂಗ್, ಎಂ. ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಶಹಬಾಝ್ ಅಹ್ಮದ್, ಆಕಾಶ್ ಸಿಂಗ್, ಶಮರ್ ಜೋಸೆಫ್, ಪ್ರಿನ್ಸ್ ಯಾದವ್, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್ಗೇಕರ್, ಅರ್ಶಿನ್ ಕುಲಕರ್ಣಿ, ಮ್ಯಾಥ್ಯೂ ಬ್ರೀಟ್ಝ್ಕ್, ಮಯಾಂಕ್ ಯಾದವ್.
























