AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೆ ಸಂಜೀವ್ ಗೊಯೆಂಕಾ ಖಡಕ್ ಸೂಚನೆ

Sanjiv goenka - Rishabh pant: ಲಕ್ನೋ ಸೂಪರ್ ಜೈಂಟ್ಸ್ ತಂಡವು ಮತ್ತೊಮ್ಮೆ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಸಹ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಮೂಲಕ..!

ಝಾಹಿರ್ ಯೂಸುಫ್
|

Updated on: Apr 02, 2025 | 8:11 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ LSG 171 ರನ್​ ಕಲೆಹಾಕಿದರೆ, ಈ ಗುರಿಯನ್ನು ಪಂಜಾಬ್ ಕಿಂಗ್ಸ್ ಕೇವಲ 16.2 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಸೋಲಿನ ಬೆನ್ನಲ್ಲೇ LSG ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಈ ಹಿಂದಿನಂತೆ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಂತೆ..!

1 / 5
ಐಪಿಎಲ್ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬಳಿಕ ಸಂಜೀವ್ ಗೊಯೆಂಕಾ ಎಲ್​ಎಸ್​ಜಿ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಅವರನ್ನು ಮೈದಾನದಲ್ಲೇ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣದಿಂದಾಗಿ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆದಿದ್ದರು. ಇದೀಗ ಅವರ ಸ್ಥಾನದಲ್ಲಿ ರಿಷಭ್ ಪಂತ್ ನಿಂತಿದ್ದಾರೆ.

2 / 5
ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲುತ್ತಿದ್ದಂತೆ ಮೈದಾನಕ್ಕೆ ಆಗಮಿಸಿದ್ದ ಸಂಜೀವ್ ಗೊಯೆಂಕಾ ಅವರು ರಿಷಭ್ ಪಂತ್ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿದ್ದರು. ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧದ ಸೋಲಿನ ಬಳಿಕ ಗೊಯೆಂಕಾ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವುದು ಕಂಡು ಬಂದಿದೆ.

3 / 5
ಆದರೆ ಈ ಬಾರಿ ರಿಷಭ್ ಪಂತ್ ಅವರೊಂದಿಗೆ ತುಸು ಗಂಭೀರವಾಗಿ ಚರ್ಚಿಸುವಂತೆ ಕಂಡು ಬಂದಿದ್ದು, ಅಲ್ಲರೆ ಬೆರಳು ತೋರಿಸುವ ಮೂಲಕ ಖಡಕ್ ಸೂಚನೆ ನೀಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಂದರೆ ತವರು ಮೈದಾನದಲ್ಲಿ ಎಲ್​ಎಸ್​ಜಿ ತಂಡವು ಎರಡು ಪಂದ್ಯಗಳನ್ನು ಸೋತಿರುವುದನ್ನು ಸಂಜೀವ್ ಗೊಯೆಂಕಾ ಗಂಭೀರವಾಗಿ ಪರಿಗಣಿಸಿರುವ ಸಾಧ್ಯತೆಯಿದೆ.

4 / 5
ಸಂಜೀವ್ ಗೊಯೆಂಕಾ ಹಾಗೂ ರಿಷಭ್ ಪಂತ್ ಅವರ ನಡುವಣ ಈ ಬಿಸಿ ಚರ್ಚೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ಆದ ಪರಿಸ್ಥಿತಿಯೇ ಪಂತ್​ಗೂ ಬಂದು ಎರಗಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಮುಂದಿನ ಪಂದ್ಯಗಳ ಫಲಿತಾಂಶಗಳಿಂದಲೇ ಸ್ಪಷ್ಟ ಉತ್ತರವಂತು ಸಿಗಲಿದೆ.

5 / 5
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ

ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್

ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ

ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ