AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ವಿವಿಎಸ್ ಲಕ್ಷ್ಮಣ್​ಗೆ ಐಪಿಎಲ್ ಫ್ರಾಂಚೈಸಿಯಿಂದ ಬಂತು ಮೆಗಾ ಆಫರ್

IPL 2025: ಐಪಿಎಲ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತನ್ನ ಕೋಚಿಂಗ್ ಸ್ಟಾಫ್‌ನಲ್ಲಿ ವಿವಿಎಸ್ ಲಕ್ಷ್ಮಣ್ ಅವರನ್ನು ಸೇರಿಸಿಕೊಳ್ಳಲು ಆಸಕ್ತಿ ತೋರಿಸಿದೆ. ಪ್ರಸ್ತುತ ಲಕ್ಷ್ಮಣ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥರಾಗಿದ್ದು, ಅವರ ಅಧಿಕಾರಾವಧಿ ಸೆಪ್ಟೆಂಬರ್‌ನಲ್ಲಿ ಕೊನೆಗೊಳ್ಳುತ್ತದೆ.

ಪೃಥ್ವಿಶಂಕರ
|

Updated on: Jul 21, 2024 | 8:36 PM

Share
2025 ರ ಐಪಿಎಲ್ ಆರಂಭಕ್ಕೆ ಇನ್ನು ಸಾಕಷ್ಟು ಸಮಯವಿದೆ. ಆದರೂ ಹಲವು ಫ್ರಾಂಚೈಸಿಗಳು ಮುಂದಿನ ಸೀಸನ್‌ಗೆ ಈಗಾಗಲೇ ಸಿದ್ಧತೆ ಆರಂಭಿಸಿವೆ. ವಾಸ್ತವವಾಗಿ ಮುಂದಿನ ಐಪಿಎಲ್ ಆರಂಭಕ್ಕೂ ಮೊದಲು ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಎಲ್ಲ ಫ್ರಾಂಚೈಸಿಗಳು ಹೊಸದಾಗಿ ತಂಡವನ್ನು ರಚಿಸಬೇಕಾಗಿದೆ. ಈ ಕಾರಣಕ್ಕಾಗಿ, ಫ್ರ್ಯಾಂಚೈಸ್​ಗಳು ಈಗಾಗಲೇ ಖ್ಯಾತನಾಮರ ಹಿಂದೆ ಬಿದ್ದಿವೆ.

1 / 6
ವರದಿ ಪ್ರಕಾರ, ಐಪಿಎಲ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತನ್ನ ಕೋಚಿಂಗ್ ಸ್ಟಾಫ್‌ನಲ್ಲಿ ವಿವಿಎಸ್ ಲಕ್ಷ್ಮಣ್ ಅವರನ್ನು ಸೇರಿಸಿಕೊಳ್ಳಲು ಆಸಕ್ತಿ ತೋರಿಸಿದೆ. ಪ್ರಸ್ತುತ ಲಕ್ಷ್ಮಣ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥರಾಗಿದ್ದು, ಅವರ ಅಧಿಕಾರಾವಧಿ ಸೆಪ್ಟೆಂಬರ್‌ನಲ್ಲಿ ಕೊನೆಗೊಳ್ಳುತ್ತದೆ.

2 / 6
ರಾಹುಲ್ ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಆದ ನಂತರ, ಅವರ ಸ್ಥಾನ ತುಂಬಿದ್ದ ಲಕ್ಷ್ಮಣ್ ಎನ್‌ಸಿಎ ಮುಖ್ಯಸ್ಥರಾಗಿದ್ದರು. ಆದರೆ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ  ಲಕ್ಷ್ಮಣ್, ಎನ್‌ಸಿಎಯಲ್ಲಿ ತನ್ನ ಅಧಿಕಾರಾವಧಿಯನ್ನು ವಿಸ್ತರಿಸಲು ನಿರಾಕರಿಸಿದ್ದಾರೆ.

3 / 6
ಅಲ್ಲದೆ ಗೌತಮ್ ಗಂಭೀರ್​ಗೂ ಮೊದಲು ಟೀಂ ಇಂಡಿಯಾದ ಮುಖ್ಯ ಕೋಚ್ ಆಗುವಂತೆ ಬಿಸಿಸಿಐ, ವಿವಿಎಸ್ ಲಕ್ಷ್ಮಣ್​ಗೆ ಮನವಿ ಮಾಡಿತ್ತು. ಆದರೆ ಲಕ್ಷ್ಮಣ್ ಅವರು ತಂಡದೊಂದಿಗೆ ಹೆಚ್ಚು ಪ್ರಯಾಣಿಸಲು ಇಷ್ಟವಿಲ್ಲದ ಕಾರಣ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಇದೀಗ ಎನ್​​ಸಿಎ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುತ್ತಿರುವ ಲಕ್ಷ್ಮಣ್​ರನ್ನು ತಂಡಕ್ಕೆ ಸೇರಿಸಿಕೊಳ್ಳಲು ಲಕ್ನೋ ಸೂಪರ್​ಜೈಂಟ್ಸ್ ಫ್ರಾಂಚೈಸಿ ಮುಂದಾಗಿದೆ ಎಂದು ವರದಿಯಾಗಿದೆ.

4 / 6
ಈಗಾಗಲೇ ಲಕ್ನೋ ಸೂಪರ್​ಜೈಂಟ್ಸ್ ಆಡಳಿತ ವರ್ಗ ಲಕ್ಷ್ಮಣ್ ಜೊತೆ ಅನೌಪಚಾರಿಕ ಮಾತುಕತೆ ನಡೆಸಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಲಕ್ನೋ ಸೂಪರ್​ಜೈಂಟ್ಸ್ ಅಲ್ಲದೆ ಬೇರೆ ಫ್ರಾಂಚೈಸಿಗಳು ಸಹ ಲಕ್ಷ್ಮಣ್ ಹಿಂದೆ ಬಿದ್ದಿವೆ ಎಂದು ಹೇಳಲಾಗುತ್ತಿದೆ.

5 / 6
ಇತ್ತ ಲಕ್ಷ್ಮಣ್ ಅವರ ಅಧಿಕಾರಾವಧಿ ಮುಗಿಯುವುದರಿಂದ ತೆರನಾಗುವ ಎನ್​ಸಿಎ ಮುಖ್ಯಸ್ಥ ಸ್ಥಾನಕ್ಕೆ ಭಾರತದ ಮಾಜಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅವರನ್ನು ಆಯ್ಕೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ. ರಾಥೋಡ್ ಅವರು 2012 ರಿಂದ ಬಿಸಿಸಿಐನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಮೊದಲು ಅವರು ರಾಷ್ಟ್ರೀಯ ಆಯ್ಕೆಗಾರನಾಗಿಯೂ ಸೇವೆ ಸಲ್ಲಿಸಿದ್ದರು.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!