AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 12 ವರ್ಷಗಳ ಬಳಿಕ RCBಗೆ ಮರಳಿದ ಮಯಾಂಕ್ ಅಗರ್ವಾಲ್

Mayank Agarwal: ಮಯಾಂಕ್ ಅಗರ್ವಾಲ್ ಐಪಿಎಲ್​ನಲ್ಲಿ ಈವರೆಗೆ 127 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಂದು ಶತಕ ಹಾಗೂ 13 ಅರ್ಧಶತಕಗಳೊಂದಿಗೆ ಒಟ್ಟು 2665 ರನ್ ಕಲೆಹಾಕಿದ್ದಾರೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೂರು ಸೀಸನ್​ ಆಡಿದ್ದ ಮಯಾಂಕ್ ಅಗರ್ವಾಲ್ ಒಟ್ಟು 29 ಪಂದ್ಯಗಳನ್ನಾಡಿದ್ದರು. ಇದೀಗ 12 ವರ್ಷಗಳ ಬಳಿಕ ಮತ್ತೆ ಹಳೆಯ ತಂಡಕ್ಕೆ ಮರಳಿದ್ದಾರೆ.

ಝಾಹಿರ್ ಯೂಸುಫ್
|

Updated on: May 08, 2025 | 7:30 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ದೇವದತ್ ಪಡಿಕ್ಕಲ್ ಹೊರಬಿದ್ದಿದ್ದಾರೆ. ಬಲ ಮಂಡಿರಜ್ಜು ಗಾಯಕ್ಕೆ ಒಳಗಾಗಿರುವ ಪಡಿಕ್ಕಲ್ ಅವರು ಆರ್​ಸಿಬಿ ತಂಡದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ (Mayank Agarwal) ಆಯ್ಕೆಯಾಗಿದ್ದಾರೆ. ಅದು ಕೂಡ 12 ವರ್ಷಗಳ ಬಳಿಕ ಎಂಬುದು ವಿಶೇಷ.

1 / 5
ಅಂದರೆ ಮಯಾಂಕ್ ಅಗರ್ವಾಲ್ 12 ವರ್ಷಗಳ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದರು. ಅದರಲ್ಲೂ ಅವರು ಐಪಿಎಲ್ ಕೆರಿಯರ್ ಆರಂಭಿಸಿದ್ದು ಆರ್​ಸಿಬಿ ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. 2011 ರಲ್ಲಿ ಮಯಾಂಕ್ ಅಗರ್ವಾಲ್ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದರು.

2 / 5
ಮೊದಲ ಸೀಸನ್​ನಲ್ಲಿ 8 ಪಂದ್ಯಗಳನ್ನಾಡಿದ್ದ ಮಯಾಂಕ್ 141 ರನ್​ ಕಲೆಹಾಕಿದ್ದರು. ಹೀಗಾಗಿ ಅವರನ್ನು 2012 ರಲ್ಲೂ ತಂಡದಲ್ಲೇ ಉಳಿಸಲಾಗಿತ್ತು. ಅದರಂತೆ 2012 ರಲ್ಲಿ 16 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಅವರು ಒಟ್ಟು 216 ರನ್ ಬಾರಿಸಿದ್ದರು. ಇನ್ನು 2013 ರಲ್ಲೂ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಮಯಾಂಕ್ 5 ಪಂದ್ಯಗಳಲ್ಲಿ ಕೇವಲ 67 ರನ್​ ಮಾತ್ರ ಗಳಿಸಿದ್ದರು.

3 / 5
2013 ರಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪರಿಣಾಮ ಮರು ವರ್ಷವೇ ಮಯಾಂಕ್ ಅಗರ್ವಾಲ್ ಅವರನ್ನು ಆರ್​ಸಿಬಿ ತಂಡದಿಂದ ಕೈ ಬಿಟ್ಟಿತ್ತು. ಇದಾದ ಬಳಿಕ 2014 ರಿಂದ 2016ರವರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. 2017 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್​ ತಂಡದಲ್ಲಿದ್ದ ಮಯಾಂಕ್ ಅವರು ಆ ಬಳಿಕ 2018 ರಿಂದ 2022 ರವರೆಗೆ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು.

4 / 5
2023 ಹಾಗೂ 2024 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಕಾಣಿಸಿಕೊಂಡಿದ್ದ ಮಯಾಂಕ್ ಅಗರ್ವಾಲ್ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಕನ್ನಡಿಗ ಆರ್​ಸಿಬಿ ತಂಡಕ್ಕೆ ರಿಎಂಟ್ರೆ ಕೊಟ್ಟಿದ್ದಾರೆ. ಅದು ಕೂಡ ಬರೋಬ್ಬರಿ 12 ವರ್ಷಗಳ ಬಳಿಕ ಎಂಬುದು ವಿಶೇಷ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ