AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗ್ಲೆನ್ ಮ್ಯಾಕ್ಸ್‌ವೆಲ್ ಖರೀದಿಗೆ ಮೂರು ಫ್ರಾಂಚೈಸಿಗಳ ನಡುವೆ ಪೈಪೋಟಿ

Glenn Maxwell: ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಪಂದ್ಯಗಳನ್ನು ಆಡಿದದ್ದ ಮ್ಯಾಕ್ಸ್‌ವೆಲ್ ಕೇವಲ 52 ರನ್ ಬಾರಿಸಿದಲ್ಲದೆ, ಕೇವಲ 6 ವಿಕೆಟ್​ಗಳನ್ನು ಪಡೆಯುವಲ್ಲಿ ಸಫಲರಾಗಿದ್ದರು. ಹೀಗಾಗಿ ಮೆಗಾ ಹರಾಜಿಗೂ ಮೊದಲು ಮ್ಯಾಕ್ಸ್‌ವೆಲ್​ರನ್ನು ಆರ್​ಸಿಬಿ ಬಿಡುಗಡೆ ಮಾಡಬಹುದು ಎಂದು ಹೇಳಲಾಗುತ್ತಿದೆ.

ಪೃಥ್ವಿಶಂಕರ
|

Updated on: Aug 12, 2024 | 10:44 PM

Share
2025 ರ ಐಪಿಎಲ್​ಗೂ ಮುನ್ನ ಮೆಗಾ ಹರಾಜು ನಡೆಯಲ್ಲಿದೆ. ಹೀಗಾಗಿ ಮೆಗಾ ಹರಾಜಿಗೂ ಮುನ್ನ ಯಾವ್ಯಾವ ಫ್ರಾಂಚೈಸಿಗಳು ಯಾವ್ಯಾವ ಆಟಗಾರರನ್ನು ತಮ್ಮ ತಂಡದಿಂದ ಬಿಡುಗಡೆ ಮಾಡಲಿವೆ ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಆರ್​ಸಿಬಿ ಪಾಳಯದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಹೊರಹೋಗಬಹುದು ಎಂದು ಹೇಳಲಾಗುತ್ತಿದೆ.

1 / 7
ವಾಸ್ತವವಾಗಿ 2021 ರ ಐಪಿಎಲ್​ಗೂ ಮುನ್ನ ನಡೆದ ಹರಾಜಿನಲ್ಲಿ ಬರೋಬ್ಬರಿ 14.25 ಕೋಟಿ ರೂ. ಪಡೆದು ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದ ಮ್ಯಾಕ್ಸ್​ವೆಲ್ ಮೊದಲ ಮೂರು ಆವೃತ್ತಿಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರಯ. ಆದರೆ ಕಳೆದ ಐಪಿಎಲ್​ನಲ್ಲಿ ಅಂದರೆ 2024 ರ ಐಪಿಎಲ್​ನಲ್ಲಿ ಮ್ಯಾಕ್ಸ್‌ವೆಲ್ ಪ್ರದರ್ಶನ ತೀರ ಕಳಪೆಯಾಗಿತ್ತು.

2 / 7
ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಪಂದ್ಯಗಳನ್ನು ಆಡಿದದ್ದ ಮ್ಯಾಕ್ಸ್‌ವೆಲ್ ಕೇವಲ 52 ರನ್ ಬಾರಿಸಿದಲ್ಲದೆ, ಕೇವಲ 6 ವಿಕೆಟ್​ಗಳನ್ನು ಪಡೆಯುವಲ್ಲಿ ಸಫಲರಾಗಿದ್ದರು. ಹೀಗಾಗಿ ಮೆಗಾ ಹರಾಜಿಗೂ ಮೊದಲು ಮ್ಯಾಕ್ಸ್‌ವೆಲ್​ರನ್ನು ಆರ್​ಸಿಬಿ ಬಿಡುಗಡೆ ಮಾಡಬಹುದು ಎಂದು ಹೇಳಲಾಗುತ್ತಿದೆ.

3 / 7
ಇದಕ್ಕೆ ಪೂರಕವಾಗಿ ಮ್ಯಾಕ್ಸ್‌ವೆಲ್ ಕೂಡ ಇನ್​ಸ್ಟಾಗ್ರಾಮ್​ನಲ್ಲಿ ಆರ್​ಸಿಬಿಯನ್ನು ಅನ್​ ಫಾಲೋ ಮಾಡಿದ್ದಾರೆ. ಹೀಗಾಗಿ ಮ್ಯಾಕ್ಸ್‌ವೆಲ್ ಮೆಗಾ ಹರಾಜಿಗೆ ಬರುವುದು ಖಚಿತವಾಗಿದ್ದು, ಅವರನ್ನು ಖರೀದಿಸಲು ಹಲವು ಫ್ರಾಂಚೈಸಿಗಳು ತಯಾರಿ ನಡೆಸಿಕೊಂಡಿವೆ. ಅದರಲ್ಲಿ ಪ್ರಮುಖವಾಗಿ ಈ 3 ತಂಡಗಳು ಮ್ಯಾಕ್ಸ್‌ವೆಲ್ ಮೇಲೆ ಕಣ್ಣಿಟ್ಟಿವೆ.

4 / 7
ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಗ್ಲೆನ್ ಮ್ಯಾಕ್ಸ್‌ವೆಲ್ ಮೇಲೆ ಡೆಲ್ಲಿ ಕ್ಯಾಪಿಟಲ್ಸ್ ಕಣ್ಣಿಟ್ಟಿದೆ. 2018 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮ್ಯಾಕ್ಸ್‌ವೆಲ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿತ್ತು. ಇದಕ್ಕಾಗಿ ಮ್ಯಾಕ್ಸ್​ವೆಲ್​ಗೆ 9 ಕೋಟಿ ರೂ. ಖರ್ಚು ಮಾಡಿತ್ತು. ಇದಲ್ಲದೆ ಡೆಲ್ಲಿ ತಂಡ ಯಾವಾಗಲೂ ಆಸ್ಟ್ರೇಲಿಯನ್ ಆಟಗಾರರ ಮೇಲೆ ಹೆಚ್ಚು ಆಸಕ್ತಿ ತೊರುತ್ತದೆ. ಹೀಗಾಗಿ ಮ್ಯಾಕ್ಸ್‌ವೆಲ್ ಖರೀದಿಗೆ ಡೆಲ್ಲಿ ಮುಂದಾಗುವುದು ಖಚಿತ.

5 / 7
ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಮ್ಯಾಕ್ಸ್​ವೆಲ್ ಮೇಲೆ ಭಾರಿ ಮೊತ್ತವನ್ನು ಬಿಡ್ ಮಾಡಬಹುದು. ಇದಕ್ಕೆ ಕಾರಣವೂ ಇದ್ದು, ಕಳೆದ ಐಪಿಎಲ್​ನಲ್ಲಿ ಆಡಿದ 14 ಪಂದ್ಯಗಳಲ್ಲಿ ತಂಡ ಕೇವಲ 4 ಪಂದ್ಯಗಳನ್ನು ಗೆಲ್ಲಲು ಸಾಧ್ಯವಾಯಿತು. ಅಂತಹ ಪರಿಸ್ಥಿತಿಯಲ್ಲಿ, ಹೊಸ ತಂಡವನ್ನು ಕಟ್ಟಲು ಮುಂಬೈ ಮುಂದಾಗಿದೆ. ಮ್ಯಾಕ್ಸ್‌ವೆಲ್ ಈ ಹಿಂದೆಯೂ ಮುಂಬೈ ಇಂಡಿಯನ್ಸ್‌ ಪರ ಆಡಿದ್ದರಿಂದ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಮುಂದಾಗಬಹುದು.

6 / 7
ಈ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಕೂಡ ಸೇರಿದೆ. ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಬಿದ್ದ ಬಳಿಕ ತಂಡ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದೆ. ಕಳೆದ ಸೀಸನ್​ನಲ್ಲಿ ತಂಡದ ಬ್ಯಾಲೆನ್ಸ್ ತುಂಬಾ ಕೆಟ್ಟದಾಗಿತ್ತು. ಇದರ ಪರಿಣಾಮ ಆಡಿದ 14 ಪಂದ್ಯಗಳಲ್ಲಿ ತಂಡ 5 ರಲ್ಲಿ ಮಾತ್ರ ಗೆದ್ದಿತ್ತು. ಇದರಿಂದ ಪ್ಲೇಆಫ್‌ನ ರೇಸ್‌ನಿಂದಲೂ ಹೊರಬಿದ್ದಿತ್ತು. ಹೀಗಾಗಿ ಹಾರ್ದಿಕ್ ಸ್ಥಾನ ತುಂಬಲು ಆಲ್ರೌಂಡರ್ ಮ್ಯಾಕ್ಸ್‌ವೆಲ್ ಮೇಲೆ ಗುಜರಾತ್ ಹಣದ ಮಳೆ ಹರಿಸುವುದು ಖಚಿತ.

7 / 7
Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ

ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್

ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!

ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ

‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ

ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ

ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು

ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು