AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಮೆಗಾ ಹರಾಜಿಗೆ ಡೇಟ್ ಫಿಕ್ಸ್

IPL 2025 Mega Auction: ಐಪಿಎಲ್ ಮೆಗಾ ಹರಾಜಿಗೂ ಮುನ್ನ 6 ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಈ ರಿಟೈನ್ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಅಕ್ಟೋಬರ್ 31ರವರೆಗೆ ಗಡುವು ನೀಡಲಾಗಿದ್ದು, ಹೀಗಾಗಿ ಈ ತಿಂಗಳಾಂತ್ಯದಲ್ಲಿ ಪ್ರತಿ ಫ್ರಾಂಚೈಸಿಗಳು ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಹೊರಬೀಳಲಿದೆ.

ಝಾಹಿರ್ ಯೂಸುಫ್
|

Updated on: Oct 21, 2024 | 12:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮುಂದಿನ ತಿಂಗಳು ನವೆಂಬರ್ 24 ಮತ್ತು 25 ರಂದು ಮೆಗಾ ಆಕ್ಷನ್ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇನ್ನು ಈ ಬಾರಿಯ ಮೆಗಾ ಹರಾಜು ಅರಬ್ಬರ ನಾಡಿನಲ್ಲಿ ಆಯೋಜಿಸಲು ಬಿಸಿಸಿಐ ಚಿಂತಿಸಿದೆ.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿ ನಡೆಯಲಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್​ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು ವರದಿಯಾಗಿತ್ತು. ಆದರೀಗ ಸೌದಿ ಅರೇಬಿಯಾದಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

2 / 5
ಇನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ 600 ಕ್ಕೂ ಅಧಿಕ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಆಟಗಾರರ ಹೆಸರು ನೋಂದಣಿ ನಡೆಯಲಿದ್ದು, ಇದಾದ ಬಳಿಕ ಆಟಗಾರರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಹೀಗೆ ಶಾರ್ಟ್ ಲಿಸ್ಟ್​ನಲ್ಲಿ ಸ್ಥಾನ ಪಡೆದ ಆಟಗಾರರ ಹೆಸರು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

3 / 5
ಹಾಗೆಯೇ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ 6 ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗೆ ಉಳಿಸಿಕೊಂಡ ಆಟಗಾರರಿಗೆ ಒಟ್ಟು ಹರಾಜು ಮೊತ್ತದಿಂದ 79 ಕೋಟಿ ರೂ. ವ್ಯಯಿಸಬೇಕೆಂಬ ಷರತ್ತನ್ನು ವಿಧಿಸಲಾಗಿದೆ. ಒಂದು ವೇಳೆ 5 ಆಟಗಾರರನ್ನು ರಿಟೈನ್ ಮಾಡಿಕೊಂಡರೆ 75 ಕೋಟಿ ರೂ. ಖರ್ಚು ಮಾಡಬೇಕು ಎಂದು ತಿಳಿಸಲಾಗಿದೆ.

4 / 5
ಇನ್ನು ಈ ಬಾರಿಯ ಮೆಗಾ ಹರಾಜಿಗಾಗಿ ಒಟ್ಟು 120 ಕೋಟಿ ರೂ. ನಿಗದಿ ಮಾಡಲಾಗಿದ್ದು, ಪ್ರತಿ ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ ಮೊತ್ತವನ್ನು ಒಟ್ಟು ಹರಾಜು ಮೊತ್ತದಿಂದ ಕಡಿತ ಮಾಡಲಾಗುತ್ತದೆ. ಅದರಂತೆ ಫ್ರಾಂಚೈಸಿಯೊಂದು 6 ಆಟಗಾರರನ್ನು ರಿಟೈನ್ ಮಾಡಿಕೊಂಡರೆ, 41 ಕೋಟಿ ರೂ.ನೊಂದಿಗೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!