Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸೋಲಿನ ಬೆನ್ನಲ್ಲೇ ಕಣ್ಣೀರಿಟ್ಟ ಹಾರ್ದಿಕ್ ಪಾಂಡ್ಯ

IPL 2025 LSG vs MI: ಲಕ್ನೋದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 203 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಪಡೆ 12 ರನ್​ಗಳಿಂದ ಸೋಲನುಭವಿಸಿದೆ.

ಝಾಹಿರ್ ಯೂಸುಫ್
|

Updated on: Apr 05, 2025 | 12:54 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಮುಂಬೈ ಇಂಡಿಯನ್ಸ್ (MI) ತಂಡ ಆಡಿದ 4 ಪಂದ್ಯಗಳಲ್ಲಿ ಮೂರಲ್ಲಿ ಸೋಲನುಭವಿಸಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆದ್ದು ಬೀಗಿದ್ದ ಮುಂಬೈ ಪಡೆ ಈ ಬಾರಿ ಕೂಡ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾಂಘಿಕ ಪ್ರದರ್ಶನದಿಂದಾಗಿ ಸೋಲೊಪ್ಪಿಕೊಳ್ಳಬೇಕಾಯಿತು.

1 / 5
ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಈ ಪರಾಜಯದ ಸಂಪೂರ್ಣ ಹೊಣೆಯನ್ನು ಹೊತ್ತುಕೊಳ್ಳುವುದಾಗಿ ತಿಳಿಸಿದರು. ಅಲ್ಲದೆ ತಿಲಕ್ ವರ್ಮಾ ಅವರನ್ನು ರಿಟೈರ್ಡ್ ಔಟ್ ಮಾಡಿರುವುದನ್ನು ಸಮರ್ಥಿಸಿಕೊಂಡರು. ಪೋಸ್ಟ್ ಮ್ಯಾಚ್ ಸಂದರ್ಶನದಲ್ಲಿ ನಗುಮುಖದೊಂದಿಗೆ ಕಾಣಿಸಿಕೊಂಡ ಪಾಂಡ್ಯ ಆ ಬಳಿಕ  ಭಾವುಕರಾದರು.

2 / 5
ಅಂದರೆ ಸಂದರ್ಶನದ ವೇಳೆ ತನ್ನ ಭಾವನೆಗಳನ್ನು ಅದುಮಿಟ್ಟುಕೊಂಡು ಪಾಂಡ್ಯ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಅಲ್ಲದೆ ಸಂದರ್ಶನ ಮುಗಿಯುತ್ತಿದ್ದಂತೆ ದೂರ ಸರಿದು ನಿಂತ ಹಾರ್ದಿಕ್ ಪಾಂಡ್ಯ ತನ್ನ ಮುಖ ಕೆಳಗೆ ಮಾಡಿ ತಮ್ಮ ಕಣ್ಣೀರನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವುದು ಕಂಡು ಬಂತು. ಈ ವೇಳೆ ತೆಗೆದ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಮುಂಬೈ ಇಂಡಿಯನ್ಸ್ ತಂಡವನ್ನು ಈವರೆಗೆ 17 ಪಂದ್ಯಗಳಲ್ಲಿ ಮುನ್ನಡೆಸಿರುವ ಹಾರ್ದಿಕ್ ಪಾಂಡ್ಯ ಗೆಲುವಿನ ರುಚಿ ನೋಡಿದ್ದು ಕೇವಲ 5 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 12 ಮ್ಯಾಚ್​ಗಳಲ್ಲೂ ಮುಂಬೈ ಪಡೆ ಸೋಲನುಭವಿಸಿದೆ. ಈ ಸೋಲುಗಳಿಂದಲೇ ಇದೀಗ ಹಾರ್ದಿಕ್ ಪಾಂಡ್ಯ ಹತಾಶರಾಗಿದ್ದಾರೆ.

4 / 5
ಸದ್ಯ 4 ಪಂದ್ಯಗಳನ್ನು ಮುಗಿಸಿರುವ ಮುಂಬೈ ಇಂಡಿಯನ್ಸ್ ಮುಂದೆ ಲೀಗ್​ ಹಂತದಲ್ಲಿ ಇನ್ನೂ 10 ಪಂದ್ಯಗಳಿವೆ. ಅದರಲ್ಲೂ ಮುಂದಿನ ಪಂದ್ಯವನ್ನು ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಲಿದ್ದು, ಏಪ್ರಿಲ್ 7 ರಂದು ನಡೆಯಲಿರುವ ಈ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.

5 / 5
Follow us
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?

Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು

ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ

ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ

ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ