IPL 2025: ಡಾಟ್ ಬಾಲ್ನಲ್ಲಿ ಸಿರಾಜ್ ಸೆಂಚುರಿ
IPL 2025 Mohammed Siraj: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 51ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವೇಗಿ ಮೊಹಮ್ಮದ್ ಸಿರಾಜ್ 8 ಡಾಟ್ ಬಾಲ್ ಎಸೆದಿದ್ದಾರೆ. ಈ ಎಂಟು ಡಾಟ್ ಬಾಲ್ಗಳೊಂದಿಗೆ ಸಿರಾಜ್ ಐಪಿಎಲ್ 2025 ರ ಡಾಟ್ ಬಾಲ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
Updated on: May 03, 2025 | 10:05 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) ಪರಾಕ್ರಮ ಮುಂದುವರೆದಿದೆ. ಅದು ಕೂಡ ಮಾರಕ ದಾಳಿ ಸಂಘಟಿಸುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್ನಲ್ಲಿ ನಡೆದ ಐಪಿಎಲ್ನ 52ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಸಿರಾಜ್ 4 ಓವರ್ಗಳಲ್ಲಿ 33 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು.

ಈ ನಾಲ್ಕು ಓವರ್ಗಳಲ್ಲಿ 8 ಡಾಟ್ ಬಾಲ್ಗಳನ್ನು ಎಸೆದಿದ್ದರು. ಅಂದರೆ ಸಿರಾಜ್ ಎಸೆದ 24 ಬಾಲ್ಗಳಲ್ಲಿ 8 ಎಸೆತಗಳಲ್ಲಿ ಯಾವುದೇ ರನ್ ನೀಡಿರಲಿಲ್ಲ. ಈ 8 ಎಸೆತಗಳೊಂದಿಗೆ ಐಪಿಎಲ್ 2025 ರಲ್ಲಿ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್ಗಳ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನಕ್ಕೇರಿದ್ದಾರೆ.

ಈವರೆಗೆ 10 ಪಂದ್ಯಗಳಲ್ಲಿ 38 ಓವರ್ಗಳನ್ನು ಎಸೆದಿರುವ ಮೊಹಮ್ಮದ್ ಸಿರಾಜ್ 107 ಡಾಟ್ ಬಾಲ್ ಮಾಡಿದ್ದಾರೆ. ಈ ಮೂಲಕ ಐಪಿಎಲ್ 2025 ರಲ್ಲಿ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ. ಇದರ ನಡುವೆ ಸಿರಾಜ್ 14 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಸಿಎಸ್ಕೆ ತಂಡದ ಎಡಗೈ ವೇಗಿ ಖಲೀಲ್ ಅಹ್ಮದ್. ಚೆನ್ನೈ ಸೂಪರ್ ಕಿಂಗ್ಸ್ ಪರ 10 ಪಂದ್ಯಗಳಲ್ಲಿ 35.4 ಓವರ್ಗಳನ್ನು ಎಸೆದಿರುವ ಖಲೀಲ್ ಒಟ್ಟು 106 ಡಾಟ್ ಬಾಲ್ ಎಸೆದಿದ್ದಾರೆ. ಈ ವೇಳೆ 14 ವಿಕೆಟ್ಗಳನ್ನು ಸಹ ಪಡೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಜೋಶ್ ಹ್ಯಾಝಲ್ವುಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆರ್ಸಿಬಿ ಪರ 10 ಮ್ಯಾಚ್ಗಳಲ್ಲಿ 36.5 ಓವರ್ಗಳನ್ನು ಎಸೆದಿರುವ ಹ್ಯಾಝಲ್ವುಡ್ 103 ಡಾಟ್ ಬಾಲ್ಗಳೊಂದಿಗೆ ಒಟ್ಟು 18 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



