AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡಾಟ್ ಬಾಲ್​ನಲ್ಲಿ ಸಿರಾಜ್ ಸೆಂಚುರಿ

IPL 2025 Mohammed Siraj: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 51ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವೇಗಿ ಮೊಹಮ್ಮದ್ ಸಿರಾಜ್ 8 ಡಾಟ್ ಬಾಲ್ ಎಸೆದಿದ್ದಾರೆ. ಈ ಎಂಟು ಡಾಟ್​ ಬಾಲ್​ಗಳೊಂದಿಗೆ ಸಿರಾಜ್ ಐಪಿಎಲ್​ 2025 ರ ಡಾಟ್ ಬಾಲ್​ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಝಾಹಿರ್ ಯೂಸುಫ್
|

Updated on: May 03, 2025 | 10:05 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಮೊಹಮ್ಮದ್ ಸಿರಾಜ್ (Mohammed Siraj) ಪರಾಕ್ರಮ ಮುಂದುವರೆದಿದೆ. ಅದು ಕೂಡ ಮಾರಕ ದಾಳಿ ಸಂಘಟಿಸುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್​ನಲ್ಲಿ ನಡೆದ ಐಪಿಎಲ್​ನ 52ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಸಿರಾಜ್ 4 ಓವರ್​ಗಳಲ್ಲಿ 33 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು.

1 / 5
ಈ ನಾಲ್ಕು ಓವರ್​ಗಳಲ್ಲಿ 8 ಡಾಟ್​ ಬಾಲ್​ಗಳನ್ನು ಎಸೆದಿದ್ದರು. ಅಂದರೆ ಸಿರಾಜ್ ಎಸೆದ 24 ಬಾಲ್​ಗಳಲ್ಲಿ 8 ಎಸೆತಗಳಲ್ಲಿ ಯಾವುದೇ ರನ್ ನೀಡಿರಲಿಲ್ಲ. ಈ 8 ಎಸೆತಗಳೊಂದಿಗೆ ಐಪಿಎಲ್ 2025 ರಲ್ಲಿ ಅತ್ಯಧಿಕ ಡಾಟ್ ಬಾಲ್​ ಎಸೆದ ಬೌಲರ್​ಗಳ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನಕ್ಕೇರಿದ್ದಾರೆ.

2 / 5
ಈವರೆಗೆ 10 ಪಂದ್ಯಗಳಲ್ಲಿ 38 ಓವರ್​ಗಳನ್ನು ಎಸೆದಿರುವ ಮೊಹಮ್ಮದ್ ಸಿರಾಜ್ 107 ಡಾಟ್​ ಬಾಲ್ ಮಾಡಿದ್ದಾರೆ. ಈ ಮೂಲಕ ಐಪಿಎಲ್ 2025 ರಲ್ಲಿ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ. ಇದರ ನಡುವೆ ಸಿರಾಜ್ 14 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

3 / 5
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಸಿಎಸ್​ಕೆ ತಂಡದ ಎಡಗೈ ವೇಗಿ ಖಲೀಲ್ ಅಹ್ಮದ್. ಚೆನ್ನೈ ಸೂಪರ್ ಕಿಂಗ್ಸ್ ಪರ 10 ಪಂದ್ಯಗಳಲ್ಲಿ 35.4 ಓವರ್​ಗಳನ್ನು ಎಸೆದಿರುವ ಖಲೀಲ್ ಒಟ್ಟು 106 ಡಾಟ್ ಬಾಲ್ ಎಸೆದಿದ್ದಾರೆ. ಈ ವೇಳೆ 14 ವಿಕೆಟ್​ಗಳನ್ನು ಸಹ ಪಡೆದಿದ್ದಾರೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆರ್​ಸಿಬಿ ಪರ 10 ಮ್ಯಾಚ್​ಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 103 ಡಾಟ್​ ಬಾಲ್​ಗಳೊಂದಿಗೆ ಒಟ್ಟು 18 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!

ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್

ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ

ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ

ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್

‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ

ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್

ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು

ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ