IPL 2025: CSK ತಂಡವನ್ನು ನುಗ್ಗಿ ಹೊಡೆದ 5 ತಂಡಗಳು

Updated on: May 01, 2025 | 11:30 AM

IPL 2025 Chennai Super Kings: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಮ್ಯಾಚ್​ಗಳಲ್ಲಿ 5 ಪಂದ್ಯಗಳನ್ನು ತವರು ಮೈದಾನದಲ್ಲಿ ಸೋತಿದೆ. ಅಂದರೆ ತವರು ಮೈದಾನದಲ್ಲಿ ಮುಗ್ಗರಿಸುವ ಮೂಲಕ ಸಿಎಸ್​ಕೆ ತಂಡವು ಐಪಿಎಲ್ 2025ರ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.

1 / 8
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಪ್ಲೇಆಫ್ ರೇಸ್​ನಿಂದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೊರಬಿದ್ದಿದೆ. ಅದು ಕೂಡ ತವರಿನಲ್ಲಿ 5 ಪಂದ್ಯಗಳಲ್ಲಿ ಸೋಲುವ ಮೂಲಕ ಎಂಬುದು ವಿಶೇಷ. ಆಡಿದ 10 ಪಂದ್ಯಗಳಲ್ಲಿ ಸಿಎಸ್​ಕೆ ತಂಡವು 8 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ.

2 / 8
ಈ 8 ಪಂದ್ಯಗಳಲ್ಲಿ 5 ಮ್ಯಾಚ್​ಗಳನ್ನು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಸೋತಿರುವುದೇ ಅಚ್ಚರಿ. ಅಂದರೆ ಐಪಿಎಲ್ ಇತಿಹಾಸದಲ್ಲಿ ಸಿಎಸ್​ಕೆ ತಂಡವು ಸೀಸನ್​ವೊಂದರಲ್ಲಿ ಚೆಪಾಕ್ ಮೈದಾನದಲ್ಲಿ ನಾಲ್ಕಕ್ಕಿಂತ ಹೆಚ್ಚು ಸೋಲು ಕಂಡಿರಲಿಲ್ಲ. ಆದರೆ ಈ ಬಾರಿ 5 ತಂಡಗಳು ಸಿಎಸ್​ಕೆ ಕೋಟೆಯನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ.

3 / 8
ಚೆನ್ನೈನಲ್ಲಿ ನಡೆದ ಐಪಿಎಲ್​ನ 8ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 196 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವನ್ನು 146 ರನ್​ಗಳಿಗೆ ನಿಯಂತ್ರಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 50 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ 17 ವರ್ಷಗಳ ಬಳಿಕ ಸಿಎಸ್​ಕೆ ತಂಡವನ್ನು ಚೆಪಾಕ್​ನಲ್ಲಿ ಸೋಲಿಸವಲ್ಲಿ ಆರ್​ಸಿಬಿ ತಂಡ ಯಶಸ್ವಿಯಾಯಿತು.

4 / 8
ಐಪಿಎಲ್​ನ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಚೆಪಾಕ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 183 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಕಲೆಹಾಕಿದ್ದು ಕೇವಲ 158 ರನ್​ಗಳು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಚೆಪಾಕ್​ನಲ್ಲಿ 15 ವರ್ಷಗಳ ಬಳಿಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

5 / 8
ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 25ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಲೆಹಾಕಿದ್ದು 103 ರನ್​ಗಳು ಮಾತ್ರ. ಈ ಸುಲಭ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 10.1 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

6 / 8
ಐಪಿಎಲ್​ನ 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಸೋಲುಣಿಸುವಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಕೂಡ ಯಶಸ್ವಿಯಾಗಿದೆ. ಚೆಪಾಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 154 ರನ್ ಕಲೆಹಾಕಿದರೆ, ಈ ಗುರಿಯನ್ನು ಎಸ್​ಆರ್​ಹೆಚ್ ತಂಡ 18.4 ಓವರ್​ಗಳಲ್ಲಿ ಚೇಸ್ ಮಾಡಿ, 5 ವಿಕೆಟ್​ಗಳ ಜಯ ಸಾಧಿಸಿತು.

7 / 8
ಇದೀಗ ಪಂಜಾಬ್ ಕಿಂಗ್ಸ್ ಕೂಡ ಚೆಪಾಕ್ ಮೈದಾನದಲ್ಲಿ ಸಿಎಸ್​ಕೆ ತಂಡವನ್ನು ಬಗ್ಗು ಬಡಿಯುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 190 ರನ್ ಕಲೆಹಾಕಿತು. ಈ ಗುರಿಯನ್ನು ಪಂಜಾಬ್ ಕಿಂಗ್ಸ್ 19.4 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಗೆಲುವು ದಾಖಲಿಸಿದೆ.

8 / 8
ಅಂದರೆ ಇದೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ತಂಡಗಳು ಚೆಪಾಕ್ ಮೈದಾನದಲ್ಲಿ ಬಗ್ಗು ಬಡಿದಿದೆ. ಇದಕ್ಕೂ ಮುನ್ನ 2008 ಹಾಗೂ 2012 ರಲ್ಲಿ ಸಿಎಸ್​ಕೆ ತವರು ಮೈದಾನದಲ್ಲಿ 4 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಆದರೆ ಈ ಬಾರಿ 5 ತಂಡಗಳು ತವರಿನಲ್ಲಿ ಸಿಎಸ್​ಕೆ ತಂಡವನ್ನು ಮಕಾಡೆ ಮಲಗಿಸಿದೆ. ಈ ಸೋಲುಗಳಿಂದಾಗಿ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 2025ರ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ.