IPL 2025: ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಔಟ್, ಮೂವರು ಇನ್
IPL 2025 Mumbai Indians: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ (ಐಪಿಎಲ್ 2025) ಉತ್ತಮ ಪ್ರದರ್ಶನ ನೀಡಿರುವ ಮುಂಬೈ ಇಂಡಿಯನ್ಸ್ (MI) ತಂಡವು ಪ್ಲೇಆಫ್ ಹಂತಕ್ಕೇರಲು ಪ್ಯಾನ್ ರೂಪಿಸುತ್ತಿದೆ. ಈ ಯೋಜನೆಗಳ ನಡುವೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೂವರು ಸ್ಟಾರ್ ಆಟಗಾರರ ಆಗಮನವಾಗಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಪ್ಲೇಆಫ್ ಹೊಸ್ತಿಲಲ್ಲಿರುವ ಮುಂಬೈ ಇಂಡಿಯನ್ಸ್ ತಂಡದಿಂದ ಮೂವರು ಆಟಗಾರರು ಹೊರಗುಳಿಯುವುದು ಖಚಿತವಾಗಿದೆ. ಈ ಮೂವರ ಹೊರಗುಳಿಯುವಿಕೆ ಖಚಿತವಾಗುತ್ತಿದ್ದಂತೆ, ಮುಂಬೈ ಫ್ರಾಂಚೈಸಿ ಬದಲಿಯಾಗಿ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.
1 / 5
ಮುಂಬೈ ಇಂಡಿಯನ್ಸ್ ತಂಡದ ಆಲ್ರೌಂಡರ್ ವಿಲ್ ಜಾಕ್ಸ್ ಲೀಗ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ತವರಿಗೆ ಹಿಂತಿರುಗಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ಜಾಕ್ಸ್ ಸ್ಥಾನ ಪಡೆದಿದ್ದು, ಹೀಗಾಗಿ ಐಪಿಎಲ್ನ ಪ್ಲೇಆಫ್ ಪಂದ್ಯಗಳಿಗೆ ಅವರು ಲಭ್ಯರಿರುವುದಿಲ್ಲ. ಇದೀಗ ಅವರ ಬದಲಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಇಂಗ್ಲೆಂಡ್ನ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್ಸ್ಟೋವ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಿಕೊಂಡಿದೆ.
2 / 5
ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಸೌತ್ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ರಯಾನ್ ರಿಕೆಲ್ಟನ್ ಕೂಡ ಈ ವಾರ ತವರಿಗೆ ಹಿಂತಿರುಗಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾದ ಸೌತ್ ಆಫ್ರಿಕಾ ತಂಡದಲ್ಲಿ ರಿಕೆಲ್ಟನ್ ಸ್ಥಾನ ಪಡೆದಿದ್ದು, ಹೀಗಾಗಿ ಅವರು ರಾಷ್ಟ್ರೀಯ ತಂಡವನ್ನು ಕೂಡಿಕೊಳ್ಳಬೇಕಿದೆ. ಹೀಗಾಗಿ ರಿಕೆಲ್ಟನ್ ಸಹ ಪ್ಲೇಆಫ್ ಪಂದ್ಯಗಳಿಗೆ ಲಭ್ಯರಿರುವುದಿಲ್ಲ. ಇದೀಗ ರಯಾನ್ ರಿಕೆಲ್ಟನ್ ಬದಲಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಇಂಗ್ಲೆಂಡ್ ಆಟಗಾರ ರಿಚರ್ಡ್ ಗ್ಲೀಸನ್ ಅವರನ್ನು ಆಯ್ಕೆ ಮಾಡಿಕೊಂಡಿದೆ.
3 / 5
ಮುಂಬೈ ಇಂಡಿಯನ್ಸ್ ತಂಡದ ವೇಗಿ ಕಾರ್ಬಿನ್ ಬಾಷ್ ಕೂಡ ಐಪಿಎಲ್ನ ದ್ವಿತೀಯ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿರುವ ಬಾಷ್ ಈ ವಾರದೊಳಗೆ ಸೌತ್ ಆಫ್ರಿಕಾ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಇದೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಶ್ರೀಲಂಕಾದ ಚರಿತ್ ಅಸಲಂಕಾ ಅವರನ್ನು ಬದಲಿ ಆಟಗಾರನಾಗಿ ಆಯ್ಕೆ ಮಾಡಿಕೊಂಡಿದೆ.
4 / 5
ಮುಂಬೈ ಇಂಡಿಯನ್ಸ್ ತಂಡವು ಮೇ 21 ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿದ್ದು, ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗೆಲುವು ದಾಖಲಿಸಿದರೆ, ಪ್ಲೇಆಫ್ಗೇರಲಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಮಾತ್ರ ಪ್ಲೇಆಫ್ ರೇಸ್ನಲ್ಲಿ ಉಳಿಯಲಿದೆ. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.