Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ನಲ್ಲಿ ಚಾನ್ಸ್ ಸಿಕ್ಕಿದ್ದೇ ತಡ, PSL ಗೆ ಟಾಟಾ ಬೈ ಬೈ

IPL 2025: ಸೌತ್ ಆಫ್ರಿಕಾ ವೇಗಿ ಕಾರ್ಬಿನ್ ಬಾಷ್ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಬದಲಿ ಆಟಗಾರನಾಗಿ ಎಂಬುದು ವಿಶೇಷ. ಆದರೆ ಇದಕ್ಕೂ ಮುನ್ನ ಪಾಕಿಸ್ತಾನ್ ಸೂಪರ್ ಲೀಗ್ ಆಡಲು ಸಹಿ ಮಾಡಿಕೊಂಡಿದ್ದಾರೆ. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಕಾರ್ಬಿನ್ ಬಾಷ್ ಪಿಎಸ್​ಎಲ್​ಗೆ ಕೈ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 09, 2025 | 10:25 AM

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆಯಾಗಿದೆ. ಈ ಬಾರಿ ತಂಡಕ್ಕೆ ಎಂಟ್ರಿ ಕೊಟ್ಟಿರುವುದು ಸೌತ್ ಆಫ್ರಿಕಾ ವೇಗಿ ಕಾರ್ಬಿನ್ ಬಾಷ್. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಷ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

1 / 6
ಹೀಗಾಗಿ ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಹೆಸರು ನೀಡಿದ್ದರು. ಅದರಂತೆ ಪಿಎಸ್​ಎಲ್​ನ ಪೇಶಾವರ್ ಝಲ್ಮಿ ಫ್ರಾಂಚೈಸಿಯು ಬಾಷ್ ಅವರನ್ನು ಮುಂಬರುವ ಟೂರ್ನಿಗೆ ಆಯ್ಕೆ ಮಾಡಿಕೊಂಡಿದ್ದರು. ಆದರೀಗ ಸೌತ್ ಆಫ್ರಿಕಾ ಪಾಕಿಸ್ತಾನ್ ಸೂಪರ್ ಲೀಗ್​​ಗೆ ಕೈಕೊಟ್ಟಿದ್ದಾರೆ.

2 / 6
ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲಿಝಾಡ್ ವಿಲಿಯಮ್ಸ್ ಮೊಣಕಾಲಿನ ಗಾಯದ ಕಾರಣ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬದಲಿಯಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಾರ್ಬಿನ್ ಬಾಷ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

3 / 6
ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಕ್ಕಿದ್ದೇ ತಡ, ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಬಾಷ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಪಿಎಸ್​ಎಲ್​ನಲ್ಲಿ ಪೇಶಾವರ್ ಝಲ್ಮಿ ಫ್ರಾಂಚೈಸಿಗೆ ಇದೀಗ ಬದಲಿ ಆಟಗಾರನ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

4 / 6
ಅಂದಹಾಗೆ ಇದು ಮುಂಬೈ ಇಂಡಿಯನ್ಸ್ ತಂಡದ 2ನೇ ಬದಲಾವಣೆ. ಇದಕ್ಕೂ ಮುನ್ನ ಮುಂಬೈ ಫ್ರಾಂಚೈಸಿ ಬರೋಬ್ಬರಿ 4.80 ಕೋಟಿ ರೂ. ನೀಡಿ ಖರೀದಿಸಿದ್ದ ಅಲ್ಲಾ ಗಝನ್‌ಫರ್ ಗಾಯಗೊಂಡು ಹೊರಗುಳಿದಿದ್ದರು. ಅವರ ಬದಲಿಗೆ ಅಫ್ಘಾನಿಸ್ತಾನದ ಅನುಭವಿ ಸ್ಪಿನ್ನರ್ ಮುಜೀಬ್ ಉರ್ ರೆಹಮಾನ್ ಅವರನ್ನು ಮುಂಬೈ ಇಂಡಿಯನ್ಸ್ ಆಯ್ಕೆ ಮಾಡಿಕೊಂಡಿದೆ.

5 / 6
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಝ್, ಕರ್ಣ್ ಶರ್ಮಾ, ದೀಪಕ್ ಚಹರ್, ರೀಸ್ ಟೋಪ್ಲಿ, ರಿಯಾನ್ ರಿಕೆಲ್ಟನ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ಕರ್ಣ್ ಶರ್ಮಾ, ರಾಜ್ವ ಶರ್ಮಾ, ಸತ್ಯನಾರಾಯಣ ರಾಜು, ರಾಜ್​ ಬಾವ, ಕೃಷ್ಣನ್ ಶ್ರೀಜಿತ್, ಅಶ್ವಾಣಿ ಕುಮಾರ್, ಬೆವನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಮುಜೀಬ್ ಉರ್ ರೆಹಮಾನ್, ಕಾರ್ಬಿನ್ ಬಾಷ್.

6 / 6
Follow us