AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ

IPL 2025 New Schedule: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಈಗಾಗಲೇ 57 ಪಂದ್ಯಗಳು ಪೂರ್ಣಗೊಂಡಿದ್ದು, ಇದೀಗ ಉಳಿದ ಪಂದ್ಯಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 17 ರಿಂದ ಐಪಿಎಲ್​ಗೆ ಮತ್ತೆ ಚಾಲನೆ ದೊರೆಯಲಿದ್ದು, ಫೈನಲ್ ಪಂದ್ಯವು ಜೂನ್ 3 ರಂದು ನಡೆಯಲಿದೆ.

ಝಾಹಿರ್ ಯೂಸುಫ್
|

Updated on: May 13, 2025 | 7:04 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ. ಮೇ 8 ರಂದು ಸ್ಥಗಿತಗೊಂಡಿದ್ದ ಟೂರ್ನಿಯು ಮೇ 17 ರಂದು ಮತ್ತೆ ಶುರುವಾಗಲಿದೆ. ಅದರಂತೆ ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯಲಿದೆ.

1 / 6
ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಮೇ 17 ರಂದು ಆಡಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಐಪಿಎಲ್​ ಪುನರಾರಂಭಗೊಳ್ಳಲಿದೆ.

2 / 6
ಇನ್ನು ಮೇ 23 ರಂದು ನಡೆಯಲಿರುವ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ಕೂಡ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿರುವುದು ವಿಶೇಷ.

3 / 6
ಹಾಗೆಯೇ ಆರ್​ಸಿಬಿ ತಂಡವು ತನ್ನ ಕೊನೆಯ ಲೀಗ್ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಲಕ್ನೋ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ಐಪಿಎಲ್​ನ ಲೀಗ್ ಹಂತದ ಅಭಿಮಾನವನ್ನು ಕೊನೆಗೊಳಿಸಲಿದೆ.

4 / 6
ಈ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವುದು ಖಚಿತ. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕಣಕ್ಕಿಳಿದು ಜಯಗಳಿಸುವ ಮೂಲಕ ನೇರವಾಗಿ ಫೈನಲ್​ಗೇರಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಮೂರು ಪಂದ್ಯಗಳೂ ಕೂಡ ತುಂಬಾ ಮಹತ್ವದ್ದು ಎನ್ನಬಹುದು.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಝಲ್‌ವುಡ್, ಯಶ್ ದಯಾಳ್, ಸುಯಶ್ ಶರ್ಮಾ, ಸ್ವಪ್ನಿಲ್ ಸಿಂಗ್, ರಾಸಿಖ್ ದರ್ ಸಲಾಮ್, ಜೇಕಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಲುಂಗಿ ಎನ್‌ಗಿಡಿ, ನುವಾನ್ ತುಷಾರ, ಮೋಹಿತ್ ರಾಠಿ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್.

6 / 6