AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸಲ ಕ್ಯಾಪ್ ನಮ್ದೆ

IPL 2025 Orange and Purple Cap List: ಐಪಿಎಲ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿ ಹಾಗೂ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ಗೆ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅದರಂತೆ ಈ ಬಾರಿಯ ಐಪಿಎಲ್​ನ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಆರ್​ಸಿಬಿ ಆಟಗಾರರು ಮುಂಚೂಣಿಯಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 28, 2025 | 11:59 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್​ ಕ್ಯಾಪ್ ಪಟ್ಟಿಯಲ್ಲೂ ಆರ್​ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ.

1 / 5
ಆರೆಂಜ್​​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್​ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ.

2 / 5
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್​ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

3 / 5
ಪರ್ಪಲ್​ ಕ್ಯಾಪ್ ಪಟ್ಟಿಯಲ್ಲಿ ಆರ್​ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್​ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್​ಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 18 ವಿಕೆಟ್​ಗಳನ್ನು ಕಬಳಿಸಿ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಕನ್ನಡಿಗ ಪ್ರಸಿದ್ಧ್ ಕೃಷ್ಣ. ಗುಜರಾತ್ ಟೈಟಾನ್ಸ್ ಪರ 8 ಪಂದ್ಯಗಳಲ್ಲಿ 31 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ 16 ವಿಕೆಟ್​ಗಳನನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಹ್ಯಾಝಲ್​ವುಡ್ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.

5 / 5