
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲೂ ಆರ್ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ.

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಆರ್ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್ಗಳಲ್ಲಿ 36.5 ಓವರ್ಗಳನ್ನು ಎಸೆದಿರುವ ಹ್ಯಾಝಲ್ವುಡ್ 18 ವಿಕೆಟ್ಗಳನ್ನು ಕಬಳಿಸಿ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಕನ್ನಡಿಗ ಪ್ರಸಿದ್ಧ್ ಕೃಷ್ಣ. ಗುಜರಾತ್ ಟೈಟಾನ್ಸ್ ಪರ 8 ಪಂದ್ಯಗಳಲ್ಲಿ 31 ಓವರ್ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ 16 ವಿಕೆಟ್ಗಳನನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಹ್ಯಾಝಲ್ವುಡ್ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.