AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್​ಗೆ 12 ಲಕ್ಷ ರೂ. ದಂಡ

IPL 2025 CSK vs PBKS: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ. ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ದಂಡ ಪಾವತಿಸಿದ 7ನೇ ನಾಯಕ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: May 01, 2025 | 1:09 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ 6 ತಂಡಗಳ 7 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ದಂಡ ಕಟ್ಟಿಸಿಕೊಳ್ಳಲು ಮುಖ್ಯ ಕಾರಣ ಸ್ಲೋ ಓವರ್ ರೇಟ್ ತಪ್ಪು. ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ತಲಾ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

1 / 9
ಇಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಈ ಬಾರಿ ರಿಯಾನ್ ಪರಾಗ್ ಹಾಗೂ ಸಂಜು ಸ್ಯಾಮ್ಸನ್ ಮುನ್ನಡೆಸಿದ್ದಾರೆ. ಈ ವೇಳೆ ಇಬ್ಬರು ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಾರೆ. ಅದರಂತೆ ಒಟ್ಟು 5 ತಂಡಗಳ 6 ನಾಯಕರುಗಳು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ದಂಡ ಕಟ್ಟಿದ ಕ್ಯಾಪ್ಟನ್​ಗಳು ಯಾರೆಲ್ಲಾ ಎಂದು ನೋಡುವುದಾದರೆ...

2 / 9
ಶ್ರೇಯಸ್ ಅಯ್ಯರ್: ಚೆನ್ನೈನ ಚೆಪಾಕ್​ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿಲ್ಲ. ಹೀಗಾಗಿ ಅಯ್ಯರ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

3 / 9
ಅಕ್ಷರ್ ಪಟೇಲ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

4 / 9
ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

5 / 9
ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

6 / 9
ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ ಒಟ್ಟು 36 ಲಕ್ಷ ರೂ. (12+24) ದಂಡ ಪಾವತಿಸಿದ್ದರು. ಇದೀಗ ಆರ್​ಸಿಬಿ ವಿರುದ್ಧ ಕೂಡ ಸ್ಲೋ ಓವರ್ ರೇಟ್ ತಪ್ಪು ಮಾಡಿರುವ ಕಾರಣ 30 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿರುವ ಕಾರಣ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್​ನ ಆಟಗಾರಿಗೂ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ಹಾಕಲಾಗಿದೆ.

7 / 9
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಇದೀಗ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಆ ಬಳಿಕ ಸನ್​​ರೈಸರ್ಸ್ ಹೈದರಾಬಾದ್ ವಿರುದ್ಧ ಸ್ಲೋ ಓವರ್ ರೇಟ್ ತಪ್ಪನ್ನು ಪುನರಾವರ್ತಿಸಿದ ಕಾರಣ ಪಾಟಿದಾರ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

8 / 9
ಸಂಜು ಸ್ಯಾಮ್ಸನ್: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಕೂಡ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಮುಗಿಸಿರಲಿಲ್ಲ. ಹೀಗಾಗಿ ರಾಜಸ್ಥಾನ್ ರಾಯಲ್ಸ್​ ತಂಡದ ನಾಯಕ ಸಂಜು ಸ್ಯಾಮ್ಸನ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡವು ರಿಯಾನ್ ಪರಾಗ್ ನಾಯಕತ್ವದಲ್ಲಿ ಒಮ್ಮೆ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದರಿಂದ, 2ನೇ ಬಾರಿ ತಪ್ಪು ಪುನರಾವರ್ತಿಸಿದ ಕಾರಣ ಸ್ಯಾಮ್ಸನ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

9 / 9
Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ

ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್

‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ

ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?

ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ

ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!

ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್

ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!

ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​