IPL 2025: PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!

Updated on: May 13, 2025 | 10:55 AM

PBKS vs DC: ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಮೇ 8 ರಂದು ನಡೆಯಬೇಕಿದ್ದ ಪಂದ್ಯವನ್ನು ಮೇ 24 ಕ್ಕೆ ಮುಂದೂಡಲಾಗಿದೆ. ಅಲ್ಲದೆ ಈ ಪಂದ್ಯವನ್ನು ಜೈಪುರದ ಸವಾಯಿ ಮಾನ್​ಸಿಂಗ್ ಸ್ಡೇಡಿಯಂನಲ್ಲಿ ಆಯೋಜಿಸಲಿದ್ದಾರೆ. ಈ ಮೂಲಕ ಅರ್ಧದಲ್ಲೇ ಸ್ಥಗಿತಗೊಂಡಿದ್ದ ಪಂದ್ಯವನ್ನು ಮರು ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.

1 / 6
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಪುನರಾರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಮೇ 8 ರಂದು ಸ್ಥಗಿತಗೊಂಡಿದ್ದ ಪಂದ್ಯಾವಳಿಗೆ ಮೇ 17 ರಂದು ಮತ್ತೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಅದರಂತೆ ಶನಿವಾರದಿಂದ ಐಪಿಎಲ್ ಮತ್ತೆ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ.

2 / 6
ಇನ್ನು ಮೇ 8 ರಂದು ಅರ್ಧದಲ್ಲೇ ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಮರು ಆಯೋಜಿಸಲು ನಿರ್ಧರಿಸಲಾಗಿದೆ. ಈ ಪಂದ್ಯವು ಮೇ 24 ರಂದು ನಡೆಯಲಿದ್ದು, ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸಲಿದೆ.

3 / 6
ಇದಕ್ಕೂ ಮುನ್ನ ಮೇ 8 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 10.1 ಓವರ್​ಗಳಲ್ಲಿ 122 ರನ್​ ಕಲೆಹಾಕಿತ್ತು. ಈ ಪಂದ್ಯದ ನಡುವೆ ಭಾರತ-ಪಾಕ್ ನಡುವೆ ಯುದ್ಧ ಭೀತಿ ಎದುರಾಗಿದ್ದು, ಹೀಗಾಗಿ ಅರ್ಧದಲ್ಲೇ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

4 / 6
ಅಲ್ಲದೆ ಈ ಪಂದ್ಯ ಸ್ಥಗಿತಗೊಂಡಿದ್ದರಿಂದ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿತ್ತು. ಆದರೆ ಯುದ್ಧ ಭೀತಿ ಹಿನ್ನಲೆ ಪಂದ್ಯ ಸ್ಥಗಿತಗೊಂಡಿದ್ದರಿಂದ, ಮ್ಯಾಚ್ ಅನ್ನು ಮರು ನಿಗದಿ ಮಾಡುವಂತೆ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಗಳು ಮನವಿ ಮಾಡಿದೆ.

5 / 6
ಅದರಂತೆ ಇದೀಗ ಮೇ 24 ರಂದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ 2 ಅಂಕಗಳು ಸಿಗುವುದು ಖಚಿತ. ಆದರೆ ಸೋಲುವ ತಂಡ ಒಂದು ಅಂಕವನ್ನು ಕಳೆದುಕೊಳ್ಳಲಿದೆ. ಏಕೆಂದರೆ ಪಂದ್ಯ ಸ್ಥಗಿತಗೊಂಡಾಗ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ಹಂಚಲಾಗಿತ್ತು.

6 / 6
ಇದೀಗ ಪಾಯಿಂಟ್ಸ್​ ಟೇಬಲ್​ನಿಂದ  ಆ ಅಂಕವನ್ನು ಕಳೆಯಲಾಗಿದೆ. ಹೀಗಾಗಿ ಮರು ನಿಗದಿಯಾದ ಪಂದ್ಯದಲ್ಲಿ ಸೋಲುವ ತಂಡಕ್ಕೆ ಒಂದು ಪಾಯಿಂಟ್ಸ್​ ನಷ್ಟವಾಗಲಿದೆ. ಇತ್ತ ಗೆಲ್ಲುವ ತಂಡ 2 ಅಂಕಗಳ ಮೂಲಕ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ. ಹಾಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.