IPL 2025: 3 ಸಿಕ್ಸ್, 8 ಫೋರ್: ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಅರ್ಧಶತಕ
Mohammed Siraj: ಮೊಹಮ್ಮದ್ ಸಿರಾಜ್ 2018 ರಿಂದ 2024ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು. ಈ ವೇಳೆ 87 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸಿರಾಜ್ ಒಟ್ಟು 303.2 ಓವರ್ಗಳನ್ನು ಎಸೆದಿದ್ದರು. ಅಲ್ಲದೆ 83 ವಿಕೆಟ್ ಕಬಳಿಸಿ ಆರ್ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಇದೀಗ ಮೊಹಮ್ಮದ್ ಸಿರಾಜ್ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
Updated on: Mar 26, 2025 | 9:04 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 7 ವರ್ಷಗಳ ಕಾಲ ಆಡಿದ್ದ ಮೊಹಮ್ಮದ್ ಸಿರಾಜ್ ಇದೀಗ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಈ ಬಾರಿಯ ಗುಜರಾತ್ ಟೈಟಾನ್ಸ್ ತಂಡದ ಮೊದಲ ಪಂದ್ಯದಲ್ಲೇ ಕಣಕ್ಕಿಳಿದಿದ್ದಾರೆ. ಹೀಗೆ ಹೊಸ ತಂಡದ ಪರ ಕಣಕ್ಕಿಳಿದ ಸಿರಾಜ್ಗೆ ನಿರಾಸೆ ಕಾದಿತ್ತು.

ಏಕೆಂದರೆ ಗುಜರಾತ್ ಟೈಟಾನ್ಸ್ ಪರ ಚೊಚ್ಚಲ ಪಂದ್ಯವಾಡಿದ ಮೊಹಮ್ಮದ್ ಸಿರಾಜ್ 4 ಓವರ್ಗಳಲ್ಲಿ ನೀಡಿದ್ದು ಬರೋಬ್ಬರಿ 54 ರನ್ಗಳು. ಈ ವೇಳೆ 3 ಸಿಕ್ಸ್ ಹಾಗೂ 8 ಫೋರ್ಗಳನ್ನು ಚಚ್ಚಿಸಿಕೊಂಡಿದ್ದಾರೆ. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ.

ಅದರಲ್ಲೂ ಮೊಹಮ್ಮದ್ ಸಿರಾಜ್ ಎಸೆದ 20ನೇ ಓವರ್ನಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟರ್ಗಳು ಬರೋಬ್ಬರಿ 23 ರನ್ ಚಚ್ಚಿದರು. ಈ ಮೂಲಕ ಪಂಜಾಬ್ ಪಡೆ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 243 ರನ್ ಕಲೆಹಾಕಿತು. ಈ ದುಬಾರಿ ಓವರ್ ಗುಜರಾತ್ ಸೋಲಿಗೆ ಕಾರಣವಾಯಿತು ಎಂದರೆ ತಪ್ಪಾಗಲಾರದು.

ಏಕೆಂದರೆ 244 ರನ್ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಅಂತಿಮವಾಗಿ 232 ರನ್ಗಳಿಸಿತು. ಅಲ್ಲದೆ ಕೇವಲ 11 ರನ್ಗಳಿಂದ ಸೋಲೊಪ್ಪಿಕೊಂಡಿತು. ಅಂದರೆ ಕೊನೆಯ ಓವರ್ನಲ್ಲಿ ಸಿರಾಜ್ ನೀಡಿದ 22 ರನ್ಗಳೇ ಗುಜರಾತ್ ಟೈಟಾನ್ಸ್ ತಂಡದ ಗೆಲುವಿಗೆ ಮುಳುವಾಯಿತು ಎನ್ನಬಹುದು.

2018 ರಿಂದ 2024ರವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 87 ಪಂದ್ಯಗಳನ್ನಾಡಿರುವ ಮೊಹಮ್ಮದ್ ಸಿರಾಜ್ ಒಟ್ಟು 303.2 ಓವರ್ಗಳನ್ನು ಎಸೆದಿದ್ದರು. ಈ ವೇಳೆ 83 ವಿಕೆಟ್ ಕಬಳಿಸಿ ಆರ್ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಇದೀಗ ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ವೇಗಿಯಾಗಿ ಕಣಕ್ಕಿಳಿಯುತ್ತಿದ್ದಾರೆ.



















