IPL 2025: ಇಂದಿನ ಪಂದ್ಯಕ್ಕೆ 8 ಆಟಗಾರರು ಅಲಭ್ಯ..!

Updated on: May 18, 2025 | 12:31 PM

IPL 2025 RR vs PBKS, GT vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 59ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯಗಳಿಗೆ ಒಟ್ಟು 8 ಆಟಗಾರರು ಅಲಭ್ಯರಾಗಿದ್ದಾರೆ.

1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ (ಮೇ 18) ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಸಂಜೆ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾದರೆ, ರಾತ್ರಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ.

2 / 5
ಈ ಪಂದ್ಯಗಳಿಗೆ ಒಟ್ಟು 8 ಆಟಗಾರರು ಅಲಭ್ಯರಾಗಿದ್ದಾರೆ. ಅಂದರೆ ಭಾರತ-ಪಾಕ್ ನಡುವಣ ಯುದ್ಧ ಭೀತಿಯಿಂದಾಗಿ ತವರಿಗೆ ತೆರಳಿದ 8 ಆಟಗಾರರು ಮರಳಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮೂವರು ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ರಾಜಸ್ಥಾನ್ ರಾಯಲ್ಸ್ ತಂಡ ಇಬ್ಬರು ಆಟಗಾರರು ಕೂಡ ಅಲಭ್ಯರಾಗಿದ್ದಾರೆ. ಆ ಆಟಗಾರರು ಯಾರೆಂದರೆ...

3 / 5
ಪಂಜಾಬ್ ಕಿಂಗ್ಸ್: ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ ಜೋಶ್ ಇಂಗ್ಲಿಸ್ ಪಂಜಾಬ್ ಕಿಂಗ್ಸ್ ತಂಡವನ್ನು ಕೂಡಿಕೊಂಡಿಲ್ಲ. ಹಾಗೆಯೇ ಆಲ್​ರೌಂಡರ್ ಮಾರ್ಕಸ್ ಸ್ಟೋಯಿನಿಸ್ ಕೂಡ ಪಂಜಾಬ್ ಕಿಂಗ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಆಸೀಸ್ ಆಟಗಾರ ಆರೋನ್ ಹಾರ್ಡಿ ಕೂಡ ಉಳಿದ ಪಂದ್ಯಗಳಿಗಾಗಿ ಆಗಮಿಸಿಲ್ಲ.

4 / 5
ಡೆಲ್ಲಿ ಕ್ಯಾಪಿಟಲ್ಸ್: ಆಸ್ಟ್ರೇಲಿಯಾದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಗುಳಿದಿದ್ದಾರೆ. ಇನ್ನು ಯುವ ದಾಂಡಿಗ ಜೇಕ್ ಪ್ರೇಸರ್ ಮೆಕ್​ಗುರ್ಕ್ ಕೂಡ ಡೆಲ್ಲಿ ತಂಡವನ್ನು ಕೂಡಿಕೊಂಡಿಲ್ಲ. ಇವರಲ್ಲದೆ ಸೌತ್ ಆಫ್ರಿಕಾ ಆಟಗಾರ ಡೆನೊವನ್ ಫೆರೇರಾ ಕೂಡ ಐಪಿಎಲ್​ನ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

5 / 5
ರಾಜಸ್ಥಾನ್ ರಾಯಲ್ಸ್: ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ರಾಜಸ್ಥಾನ್ ರಾಯಲ್ಸ್ ತಂಡದ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇನ್ನು ಮತ್ತೋರ್ವ ವೇಗಿ ಸೌತ್ ಆಫ್ರಿಕಾ ನಾಂಡ್ರೆ ಬರ್ಗರ್ ಕೂಡ ಆರ್​ಆರ್​ ತಂಡದ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.