- Kannada News Photo gallery Cricket photos ipl 2025 playoff scenario: delhi capitals reclaim top spot
IPL 2025: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ಗೇರಲು ಮೂರೇ ಮೂರು ಹೆಜ್ಜೆ ದೂರ
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) ಮೊದಲಾರ್ಧದಲ್ಲೇ ಪ್ಲೇಆಫ್ ಲೆಕ್ಕಾಚಾರಗಳು ಶುರುವಾಗಿದೆ. ಅದರಲ್ಲೂ ಮೊದಲ 6 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇಆಫ್ನತ್ತ ಹೆಜ್ಜೆಯನ್ನಿಟ್ಟಿದೆ. ಅಂದರೆ ಮುಂದಿನ ಹಂತಕ್ಕೇರಲು ಡೆಲ್ಲಿ ಪಡೆಗೆ ಕೇವಲ 3 ಗೆಲುವುಗಳ ಅವಶ್ಯಕತೆಯಿದೆ.
Updated on: Apr 17, 2025 | 10:54 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡಿದ 6 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು 5 ಜಯ ಸಾಧಿಸಿದೆ. ಈ ಐದು ಗೆಲುವುಗಳೊಂದಿಗೆ ಒಟ್ಟು 10 ಅಂಕಗಳನ್ನು ಕಲೆಹಾಕಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಂದರೆ ಮೊದಲಾರ್ಧಲ್ಲೇ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಡೆಲ್ಲಿ ಪಡೆ ಪ್ಲೇಆಫ್ನತ್ತ ಹೆಜ್ಜೆಯನ್ನಿಟ್ಟಿದೆ.

ಐಪಿಎಲ್ನ ಪ್ಲೇಆಫ್ ಕಟ್ ಆಫ್ ಪಾಯಿಂಟ್ 16. ಅಂದರೆ 16 ಅಂಕಗಳನ್ನು ಪಡೆಯುವ ತಂಡವು ಪ್ಲೇಆಫ್ಗೇರುವುದು ಬಹುತೇಕ ಖಚಿತ. ಇದೀಗ 6 ಪಂದ್ಯಗಳಲ್ಲಿ 10 ಅಂಕಗಳನ್ನು ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 8 ಪಂದ್ಯಗಳಲ್ಲಿ ಮೂರು ಜಯ ಸಾಧಿಸಿದರೆ ಸಾಕು. ಈ ಮೂಲಕ ಒಟ್ಟು 16 ಅಂಕಗಳನ್ನು ಪಡೆದು ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಬಹುದು. ಅದರಂತೆ 32 ಪಂದ್ಯಗಳ ಮುಕ್ತಾಯದ ವೇಳೆಗೆ ಪ್ಲೇಆಫ್ಗೇರಲು ಯಾವ ತಂಡಕ್ಕೆ ಎಷ್ಟು ಗೆಲುವಿನ ಅಗತ್ಯವಿದೆ ಎಂದು ನೋಡುವುದಾದರೆ....

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು ಇನ್ನುಳಿದಿರುವುದು 3 ಮ್ಯಾಚ್ಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್ಸಿಬಿ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಒಂದು ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ಗೇರಲಿದೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಲಿದೆ.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.

ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 2 ಪಂದ್ಯಗಳಲ್ಲೂ ಜಯ ಸಾಧಿಸಿದರೆ 15 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 15 ಅಂಕಗಳನ್ನು ಪಡೆದರೆ ಮಾತ್ರ ಕೆಕೆಆರ್ಗೆ ನೆಟ್ ರನ್ ರೇಟ್ ಮೂಲಕ ಪ್ಲೇಆಫ್ಗೇರಲು ಅವಕಾಶ ಸಿಗಲಿದೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 12 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್ಗೆ ಪ್ರವೇಶಿಸಲು ಅವಕಾಶವಿಲ್ಲ. ಅದರಂತೆ ಈಗಾಗಲೇ ಆರ್ಆರ್ ಪಡೆ ಐಪಿಎಲ್ 2025 ರಿಂದ ಹೊರಬಿದ್ದಿದೆ.

ಸನ್ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಎಸ್ಆರ್ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ ಪ್ಲೇಆಫ್ಗೇರಲು ಸಾಧ್ಯವಾಗುವುದಿಲ್ಲ.

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಸಿಎಸ್ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೂ ಚೆನ್ನೈ ಪಡೆ ಪ್ಲೇಆಫ್ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಎಸ್ಕೆ ಕೂಡ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ.



















