IPL 2025: 30 ಪಂದ್ಯ ಪೂರ್ಣ: ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?
IPL 2025 Playoffs race: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪ್ಲೇಆಫ್ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳನ್ನು ಪಡೆದರೆ ಸಾಕು. ಇದೀಗ ಎಲ್ಲಾ ತಂಡಗಳ 6 ಪಂದ್ಯಗಳು ಮುಗಿದಿವೆ. ಅತ್ತ ಟೂರ್ನಿಯ 30 ಪಂದ್ಯಗಳು ಸಹ ಪೂರ್ಣಗೊಂಡಿವೆ. ಇದರ ಬೆನ್ನಲ್ಲೇ ಪ್ಲೇಆಫ್ಸ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಅದರಂತೆ ಈ ಬಾರಿ ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಇನ್ನು ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂದು ನೋಡುವುದಾದರೆ...
Updated on: Apr 15, 2025 | 11:55 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18ರ 43 ಪಂದ್ಯಗಳು ಪೂರ್ಣಗೊಂಡಿದೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 3 ತಂಡಗಳು ತಲಾ 12 ಅಂಕಗಳನ್ನು ಕಲೆಹಾಕಿದರೆ, 2 ತಂಡಗಳು ಕೇವಲ 4 ಪಾಯಿಂಟ್ಸ್ ಮಾತ್ರ ಗಳಿಸಿದೆ. ಇಲ್ಲಿ 12 ಅಂಕಗಳನ್ನು ಹೊಂದಿರುವ ಮೂರು ತಂಡಗಳು ಮುಂದಿನ ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಪ್ಲೇಆಫ್ ಹಂತಕ್ಕೇರಬಹುದು. ಅದರಂತೆ ಪ್ಲೇಆಫ್ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂದು ನೋಡುವುದಾದರೆ...

ಅಂದರೆ CSK ಮತ್ತು LSG ತಂಡಗಳ ಮೊದಲ ಸುತ್ತು ಪೂರ್ಣಗೊಂಡಿವೆ. ಮೊದಲ ಸುತ್ತಿನ ಮುಕ್ತಾಯದ ವೇಳೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡವು 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇದಾಗ್ಯೂ ಸಿಎಸ್ಕೆ ತಂಡ ಪ್ಲೇಆಫ್ ರೇಸ್ನಿಂದ ಹೊರಬಿದ್ದಿಲ್ಲ. ಹಾಗಿದ್ರೆ ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್ ಹಂತಕ್ಕೇರಬಹುದು ಎಂದು ನೋಡೋಣ...

ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 8 ಪಂದ್ಯಗಳಲ್ಲಿ 6 ರಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಜಿಟಿ ಪಡೆಯು ಇನ್ನುಳಿದಿರುವುದು 6 ಮ್ಯಾಚ್ಗಳಲ್ಲಿ 2 ಜಯ ಸಾಧಿಸಿದರೆ 16 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 8 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 6 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 16 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್ಸಿಬಿ ತಂಡವು 9 ಪಂದ್ಯಗಳಲ್ಲಿ 6 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 5 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ 2 ಜಯ ಸಾಧಿಸಿದರೆ ಪ್ಲೇಆಫ್ ಹಂತಕ್ಕೇರಲಿದೆ.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 9 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 5 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್ಗೇರಲಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 8 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 6 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದರೆ 16 ಅಂಕಗಳನ್ನು ಪಡೆದುಕೊಳ್ಳಬಹುದು. ಈ ಮೂಲಕ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 8 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 6 ಮ್ಯಾಚ್ಗಳಲ್ಲಿ 3 ಗೆಲುವು ದಾಖಲಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಲಿದೆ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 9 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್ಆರ್ ತಂಡಕ್ಕೆ ಇನ್ನೂ 5 ಪಂದ್ಯಗಳಿದ್ದು, ಈ ಎಲ್ಲಾ ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ ಪ್ಲೇಆಫ್ ಹಂತಕ್ಕೇರಬಹುದು. ಆದರೆ ಅದು ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 14 ಅಂಕಗಳನ್ನು ಗಳಿಸಿದರೆ ಮಾತ್ರ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಜಯ ಸಾಧಿಸಿದೆ. ಇನ್ನುಳಿದ 5 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿದರೆ 16 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

ಸನ್ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 9 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 5 ಪಂದ್ಯಗಳಲ್ಲಿ ಎಸ್ಆರ್ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಪ್ಲೇಆಫ್ಗೆ ಪ್ರವೇಶಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 9 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಸಿಎಸ್ಕೆ ತಂಡಕ್ಕೆ ಇನ್ನೂ 5 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೆ ಪ್ಲೇಆಫ್ಗೆ ಅರ್ಹತೆ ಪಡೆಯಬಹುದು. ಅಂದರೆ ಉಳಿದ ಎಲ್ಲಾ ಮ್ಯಾಚ್ಗಳಲ್ಲಿ ಜಯ ಸಾಧಿಸಬೇಕು. ಹಾಗೆಯೇ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 14 ಅಂಕಗಳನ್ನು ಪಡೆದಿದ್ದರೆ ನೆಟ್ ರನ್ ರೇಟ್ ಮೂಲಕ ಪ್ಲೇಆಫ್ ಹಂತಕ್ಕೇರಬಹುದು.



















