IPL 2025: ಟಾರ್ಗೆಟ್ 18: ಇಲ್ಲಿದೆ 8 ತಂಡಗಳ ಪ್ಲೇಆಫ್ ಲೆಕ್ಕಾಚಾರ
IPL 2025 Playoff Scenario: ಐಪಿಎಲ್ನಲ್ಲಿ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲು ಕನಿಷ್ಠ 16 ಅಂಕಗಳನ್ನು ಪಡೆದರೆ ಸಾಕಿತ್ತು. ಆದರೆ ಈ ಬಾರಿ ಎಲ್ಲಾ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬಂದಿದೆ. ಹೀಗಾಗಿ ಪ್ಲೇಆಫ್ ಖಚಿತಪಡಿಸಿಕೊಳ್ಳಲು ಕನಿಷ್ಠ 18 ಅಂಕಗಳನ್ನು ಪಡೆಯುವುದು ಅನಿವಾರ್ಯವಾಗಿ ಮಾರ್ಪಟ್ಟಿದೆ.
Updated on: May 05, 2025 | 9:59 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ ಉಳಿದ ಪಂದ್ಯಗಳು ಇಂದಿನಿಂದ (ಮೇ 17) ಶುರುವಾಗಲಿದೆ. ಈಗಾಗಲೇ 57 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 17 ಮ್ಯಾಚ್ಗಳು ಮಾತ್ರ. ಈ ಹದಿನೇಳು ಪಂದ್ಯಗಳಲ್ಲಿ 13 ಲೀಗ್ ಮ್ಯಾಚ್ ಮಾತ್ರ ಬಾಕಿಯಿದೆ. ಈ ಹದಿಮೂರು ಪಂದ್ಯಗಳ ಮೂಲಕ ಈ ಬಾರಿಯ ಐಪಿಎಲ್ನಲ್ಲಿ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಸದ್ಯ 7 ತಂಡಗಳು ಪ್ಲೇಆಫ್ ರೇಸ್ನಲ್ಲಿದ್ದು, ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಪ್ಲೇಆಫ್ಗೇರಬಹುದು ಎಂದು ನೋಡುವುದಾದರೆ...

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್ಸಿಬಿ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ದಾಖಲಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇನ್ನೂ 3 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಒಂದು ಜಯ ಸಾಧಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ಗೇರಲಿದೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಲಿದೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಬಹುದು.

ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 11 ಪಂದ್ಯಗಳಲ್ಲಿ 8 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು ಇನ್ನುಳಿದಿರುವುದು 3 ಮ್ಯಾಚ್ಗಳಲ್ಲಿ 1 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 11 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 3 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಕೊಲ್ಕತ್ತಾ ನೈಟ್ ರೈಡರ್ಸ್: ಅಂಜಿಕ್ಯ ರಹಾನೆ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 12 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 2 ಪಂದ್ಯಗಳಲ್ಲೂ ಜಯ ಸಾಧಿಸಿದರೆ 15 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 15 ಅಂಕಗಳನ್ನು ಪಡೆದರೆ ಮಾತ್ರ ಕೆಕೆಆರ್ಗೆ ನೆಟ್ ರನ್ ರೇಟ್ ಮೂಲಕ ಪ್ಲೇಆಫ್ಗೇರಲು ಅವಕಾಶ ಸಿಗಲಿದೆ.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.

ಸನ್ರೈಸರ್ಸ್ ಹೈದರಾಬಾದ್: ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ ಆಡಿದ 11 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ. ಇನ್ನುಳಿದ 3 ಪಂದ್ಯಗಳಲ್ಲಿ ಎಸ್ಆರ್ಹೆಚ್ ತಂಡ ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೂ ಪ್ಲೇಆಫ್ಗೇರಲು ಸಾಧ್ಯವಾಗುವುದಿಲ್ಲ.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡವು 12 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಆರ್ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಜಯ ಸಾಧಿಸಿದರೂ ಪ್ಲೇಆಫ್ಗೆ ಪ್ರವೇಶಿಸಲು ಅವಕಾಶವಿಲ್ಲ. ಅದರಂತೆ ಈಗಾಗಲೇ ಆರ್ಆರ್ ಪಡೆ ಐಪಿಎಲ್ 2025 ರಿಂದ ಹೊರಬಿದ್ದಿದೆ.

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಸಿಎಸ್ಕೆ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೂ ಚೆನ್ನೈ ಪಡೆ ಪ್ಲೇಆಫ್ಗೆ ಪ್ರವೇಶಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸಿಎಸ್ಕೆ ಕೂಡ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



