IPL 2025: DC ಗೆ ಸತತ ಸೋಲು: ಅಂಕ ಪಟ್ಟಿಯಲ್ಲಿ ಮಹತ್ವದ ಬದಲಾವಣೆ
IPL 2025 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ 48ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲನುಭವಿಸಿದೆ. ಈ ಫಲಿತಾಂಶದೊಂದಿಗೆ ಐಪಿಎಲ್ 2025ರ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬಂದಿದೆ. ನೂತನ ಪಾಯಿಂಟ್ಸ್ ಟೇಬಲ್ನಲ್ಲಿ ಆರ್ಸಿಬಿ ಮೊದಲ ಸ್ಥಾನದಲ್ಲಿದ್ದರೆ, ಸಿಎಸ್ಕೆ ಕೊನೆಯ ಸ್ಥಾನದಲ್ಲಿದೆ.
Updated on: Apr 30, 2025 | 10:30 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 48 ಪಂದ್ಯಗಳು ಮುಗಿದೆ. ಈ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಈ ಬಾರಿ ಅಗ್ರಸ್ಥಾನ ಅಲಂಕರಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ. ಆಡಿರುವ 10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಆರ್ಸಿಬಿ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಮತ್ತೊಂದೆಡೆ ಸತತ ಗೆಲುವುಗಳೊಂದಿಗೆ ಮುಂಚೂಣಿಯಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದೀಗ ಸತತ ಸೋಲುಗಳಿಂದ ಕೆಂಗೆಟ್ಟಿದೆ. ಆರ್ಸಿಬಿ ಹಾಗೂ ಕೆಕೆಆರ್ ವಿರುದ್ಧದ ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ಇದೀಗ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಹಾಗಿದ್ರೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡೋಣ...

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡವು 10 ಪಂದ್ಯಗಳಲ್ಲಿ 3 ರಲ್ಲಿ ಮ್ಯಾಚ್ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನುಳಿದ 7 ಪಂದ್ಯಗಳಲ್ಲಿ ಗೆದ್ದಿರುವ ಆರ್ಸಿಬಿ ಒಟ್ಟು 14 ಅಂಕಗಳನ್ನು ಹಾಕಿದೆ. +0.521 ನೆಟ್ ರನ್ ರೇಟ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 1ನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ +0.889 ನೆಟ್ ರನ್ ರೇಟ್ನೊಂದಿಗೆ 12 ಅಂಕಗಳನ್ನು ಪಡೆದಿರುವ ಮುಂಬೈ ಇಂಡಿಯನ್ಸ್ 2ನೇ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +0.748 ನೆಟ್ ರನ್ ರೇಟ್ನೊಂದಿಗೆ ಒಟ್ಟು 12 ಅಂಕಗಳನ್ನು ಕಲೆಹಾಕಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಆಡಿದ 9 ಪಂದ್ಯಗಳಲ್ಲಿ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ +0.362 ನೆಟ್ ರನ್ ರೇಟ್ನೊಂದಿಗೆ ಒಟ್ಟು 12 ಅಂಕಗಳನ್ನು ಪಡೆದು 4ನೇ ಸ್ಥಾನ ಅಲಂಕರಿಸಿದೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಆಡಿದ 9 ಮ್ಯಾಚ್ಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಈ ಮೂಲಕ +0.177 ನೆಟ್ ರನ್ ರೇಟ್ನೊಂದಿಗೆ 11 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 5 ರಲ್ಲಿ ಜಯ ಸಾಧಿಸಿ, ಐದು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ -0.325 ನೆಟ್ ರನ್ ರೇಟ್ನೊಂದಿಗೆ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಇನ್ನುಳಿದಂತೆ ಕೊಲ್ಕತ್ತಾ ನೈಟ್ ರೈಡರ್ಸ್ (9 ಅಂಕಗಳು), ಸನ್ರೈಸರ್ಸ್ ಹೈದರಾಬಾದ್ (6 ಅಂಕಗಳು), ರಾಜಸ್ಥಾನ್ ರಾಯಲ್ಸ್ (6 ಅಂಕಗಳು), ಚೆನ್ನೈ ಸೂಪರ್ ಕಿಂಗ್ಸ್ (4 ಅಂಕಗಳು) ಕ್ರಮವಾಗಿ 7 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.



















