IPL 2025: ಮುಂಚೂಣಿಯಲ್ಲಿ RCB: ಪಾತಾಳದಲ್ಲಿ CSK
IPL 2025 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐಪಿಎಲ್ ಪಾಯಿಂಟ್ಸ್ ಟೇಬಲ್ನಲ್ಲೂ ಬದಲಾವಣೆಯಾಗಿದ್ದು, ಅದರಂತೆ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...
Updated on: Apr 28, 2025 | 9:04 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 48 ಪಂದ್ಯಗಳು ಮುಗಿದೆ. ಈ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ. ಈ ಬಾರಿ ಅಗ್ರಸ್ಥಾನ ಅಲಂಕರಿಸಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ. ಆಡಿರುವ 10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಆರ್ಸಿಬಿ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಆರ್ಸಿಬಿ ತಂಡಕ್ಕೆ ಇನ್ನೂ 4 ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್ಗಳಲ್ಲಿ ಕೇವಲ ಒಂದು ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವುದು ಖಚಿತವಾಗಲಿದೆ. ಇನ್ನುಳಿದಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿ ಎಂದು ನೋಡುವುದಾದರೆ...

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡವು 10 ಪಂದ್ಯಗಳಲ್ಲಿ 3 ರಲ್ಲಿ ಮ್ಯಾಚ್ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನುಳಿದ 7 ಪಂದ್ಯಗಳಲ್ಲಿ ಗೆದ್ದಿರುವ ಆರ್ಸಿಬಿ ಒಟ್ಟು 14 ಅಂಕಗಳನ್ನು ಹಾಕಿದೆ. +0.521 ನೆಟ್ ರನ್ ರೇಟ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ 1ನೇ ಸ್ಥಾನದಲ್ಲಿದೆ.

ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು ಈವರೆಗೆ 9 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ +0.748 ನೆಟ್ ರನ್ ರೇಟ್ನೊಂದಿಗೆ ಒಟ್ಟು 12 ಅಂಕಗಳನ್ನು ಕಲೆಹಾಕಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ +0.889 ನೆಟ್ ರನ್ ರೇಟ್ನೊಂದಿಗೆ 12 ಅಂಕಗಳನ್ನು ಪಡೆದಿರುವ ಮುಂಬೈ ಇಂಡಿಯನ್ಸ್ 2ನೇ ಸ್ಥಾನದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಆಡಿದ 9 ಪಂದ್ಯಗಳಲ್ಲಿ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ +0.362 ನೆಟ್ ರನ್ ರೇಟ್ನೊಂದಿಗೆ ಒಟ್ಟು 12 ಅಂಕಗಳನ್ನು ಪಡೆದು 4ನೇ ಸ್ಥಾನ ಅಲಂಕರಿಸಿದೆ.

ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ ತಂಡವು ಆಡಿದ 9 ಮ್ಯಾಚ್ಗಳಲ್ಲಿ ಮೂರರಲ್ಲಿ ಸೋಲನುಭವಿಸಿದೆ. ಈ ಮೂಲಕ +0.177 ನೆಟ್ ರನ್ ರೇಟ್ನೊಂದಿಗೆ 11 ಅಂಕಗಳನ್ನು ಪಡೆದಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈವರೆಗೆ 10 ಪಂದ್ಯಗಳನ್ನಾಡಿದ್ದು, ಈ ವೇಳೆ 5 ರಲ್ಲಿ ಜಯ ಸಾಧಿಸಿ, ಐದು ಪಂದ್ಯಗಳಲ್ಲಿ ಸೋಲನುಭವಿಸಿದೆ. ಈ ಮೂಲಕ -0.325 ನೆಟ್ ರನ್ ರೇಟ್ನೊಂದಿಗೆ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಇನ್ನುಳಿದಂತೆ ಕೊಲ್ಕತ್ತಾ ನೈಟ್ ರೈಡರ್ಸ್ (7 ಅಂಕಗಳು), ಸನ್ರೈಸರ್ಸ್ ಹೈದರಾಬಾದ್ (6 ಅಂಕಗಳು), ರಾಜಸ್ಥಾನ್ ರಾಯಲ್ಸ್ (4 ಅಂಕಗಳು), ಚೆನ್ನೈ ಸೂಪರ್ ಕಿಂಗ್ಸ್ (4 ಅಂಕಗಳು) ಕ್ರಮವಾಗಿ 7 ರಿಂದ 10ನೇ ಸ್ಥಾನಗಳನ್ನು ಅಲಂಕರಿಸಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



