AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ತಂಡಕ್ಕೆ ರವಿಚಂದ್ರನ್ ಅಶ್ವಿನ್ ರಿಎಂಟ್ರಿ?

IPL 2025: 2009 ರಿಂದ 2015 ರವರೆಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದ ರವಿಚಂದ್ರನ್ ಅಶ್ವಿನ್ 97 ಪಂದ್ಯಗಳಿಂದ 90 ವಿಕೆಟ್ ಕಬಳಿಸಿದ್ದರು. ಇದೀಗ 9 ವರ್ಷಗಳ ಬಳಿಕ ಮತ್ತೆ ತವರಿನ ತಂಡದ ಪರ ಕಣಕ್ಕಿಳಿಯಲು ಅಶ್ವಿನ್ ಸಜ್ಜಾಗಿದ್ದಾರೆ. ಹೀಗಾಗಿ ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಅಶ್ವಿನ್ ಖರೀದಿಗೆ ಸಿಎಸ್​ಕೆ ಮುಂದಾಗುವುದುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Sep 26, 2024 | 2:53 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18 ಮೆಗಾ ಹರಾಜಿಗೂ ಮುನ್ನ ಬಿಗ್ ಅಪ್​ಡೇಟ್​ವೊಂದು ಹೊರಬಿದ್ದಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ರವಿಚಂದ್ರನ್ ಅಶ್ವಿನ್ (R Ashwin) ಮುಂಬರುವ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 6
ಕಳೆದ ಜೂನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು (ಇಂಡಿಯಾ ಸಿಮೆಂಟ್ಸ್ ಗ್ರೂಪ್) ಸಿಎಸ್​ಕೆ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜವಾಬ್ದಾರಿಯನ್ನು ರವಿಚಂದ್ರನ್ ಅಶ್ವಿನ್ ಅವರಿಗೆ ವಹಿಸಿದ್ದರು. ಅಂದರೆ ಸಿಎಸ್​ಕೆ ತಂಡದ ಕ್ರಿಕೆಟ್ ಅಕಾಡೆಮಿ ಸೇರಿದಂತೆ ಪ್ರಮುಖ ಕೇಂದ್ರಗಳ ಜವಾಬ್ದಾರಿಯ ಹೊಣೆಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ.

2 / 6
ಚೆನ್ನೈ ಸೂಪರ್ ಕಿಂಗ್ಸ್​ ಹೈ ಪರ್ಫಾರ್ಮೆನ್ಸ್ ಸೆಂಟರ್‌ ಅನ್ನು ಸಿಎಸ್‌ಕೆ ಆಟಗಾರರಿಗೆ ತರಬೇತಿ ನೀಡಲು ತೆರೆಯಲಾಗಿದೆ. ಈ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಆಟಗಾರರಿಗೆ ಸಲಹೆ ನೀಡುವ ಮತ್ತು ಯಾವ ತರಬೇತಿ ನೀಡಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿಯನ್ನು ಅಶ್ವಿನ್ ಅವರಿಗೆ ನೀಡಲಾಗಿದೆ. ಹೀಗಾಗಿಯೇ ಮುಂದಿನ ಸೀಸನ್​ನಲ್ಲಿ ಅಶ್ವಿನ್ ಸಿಎಸ್​ಕೆ ಪರ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 6
ಏಕೆಂದರೆ ಮುಂಬರುವ ಐಪಿಎಲ್​ಗಾಗಿ ಮೆಗಾ ಹರಾಜು ನಡೆಯಲಿದ್ದು, ಈ ಹರಾಜಿನಲ್ಲಿ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಇತ್ತ ಸಿಎಸ್​ಕೆಯ ಹೈ ಪರ್ಫಾರ್ಮೆನ್ಸ್ ಸೆಂಟರ್​ನ ಪ್ರಮುಖ ಹುದ್ದೆಯನ್ನು ಅಶ್ವಿನ್​ಗೆ ನೀಡಿರುವ ಕಾರಣ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿ ಅವರನ್ನು ಹರಾಜಿನಲ್ಲಿ ಖರೀದಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.

4 / 6
ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ಅಶ್ವಿನ್ ಭಾರತ ಮತ್ತು ತಮಿಳುನಾಡಿನ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಅವರ ಉಪಸ್ಥಿತಿಯು ಹೈ ಪರ್ಫಾರ್ಮೆನ್ಸ್ ಸೆಂಟರ್ ಮತ್ತು ನಮ್ಮ ಅಕಾಡೆಮಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ. ಸೂಪರ್ ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ಅವರು ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

5 / 6
ಇತ್ತ ಸಿಎಸ್​ಕೆ ತಂಡದ ಹೈ ಪರ್ಫಾಮೆನ್ಸ್ ಸೆಂಟರ್​ನ ಉನ್ನತ ಹುದ್ದೆಯಲ್ಲಿ ಅಶ್ವಿನ್ ಕಾಣಿಸಿಕೊಳ್ಳುತ್ತಿರುವುದರಿಂದ, ಈ ಬಾರಿಯ ಮೆಗಾ ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯೇ ಅವರನ್ನು ಖರೀದಿಸಲಿದೆ ಎಂದೇ ಹೇಳಬಹುದು. ಹೀಗಾಗಿ ಐಪಿಎಲ್ 2025 ರಲ್ಲಿ ರವಿಚಂದ್ರನ್ ಅಶ್ವಿನ್ ಚೆನ್ನೈ ಸೂಪರ್ ಕಿಂಗ್ಸ್ ಪರ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ

ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್