AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ RCB ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್

Dinesh Karthik: ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ಡಿಕೆ ಹೆಸರಿನಲ್ಲಿದೆ. ಇದೀಗ ಹೊಸ ಲೀಗ್​ಗಳ ಮೂಲಕ ಹೊಸ ಇನಿಂಗ್ಸ್​ ಆರಂಭಿಸುವ ಇರಾದೆಯಲ್ಲಿದ್ದಾರೆ ಡಿಕೆ.

ಝಾಹಿರ್ ಯೂಸುಫ್
|

Updated on: Aug 28, 2024 | 8:14 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಮುಂಬರುವ ಲೆಜೆಂಡ್ಸ್​ ಲೀಗ್​ ಕ್ರಿಕೆಟ್ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. LLC ಹರಾಜಿಗೂ ಮುನ್ನ ಡಿಕೆಯನ್ನು ಸದರ್ನ್ ಸೂಪರ್​ಸ್ಟಾರ್ಸ್​ ಫ್ರಾಂಚೈಸಿಯು ಆಯ್ಕೆ ಮಾಡಿಕೊಂಡಿದೆ.

1 / 6
ಅದರಂತೆ ಲೆಜೆಂಡ್ಸ್ ಲೀಗ್​ ಕ್ರಿಕೆಟ್​ನ 2024 ರ ಆವೃತ್ತಿಯಲ್ಲಿ ದಿನೇಶ್ ಕಾರ್ತಿಕ್ ಸದರ್ನ್ ಸೂಪರ್​ಸ್ಟಾರ್ಸ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಿವೃತ್ತ ಆಟಗಾರರ ಲೀಗ್​ನಲ್ಲೂ ಡಿಕೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ.

2 / 6
ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಆಟಗಾರ ಶಿಖರ್ ಧವನ್ ಲೆಜೆಂಡ್ಸ್ ಲೀಗ್ ಕ್ರಿಕೆಟ್​ಗೆ ತಮ್ಮ ಹೆಸರು ನೀಡಿದ್ದರು. ಅದರಂತೆ ಈ ಬಾರಿಯ LLC ಹರಾಜಿನಲ್ಲಿ ಧವನ್ ಹೆಸರು ಕಾಣಿಸಿಕೊಳ್ಳಲಿದೆ. ಇದೀಗ ದಿನೇಶ್ ಕಾರ್ತಿಕ್ ಕೂಡ ಲೆಜೆಂಡ್ಸ್ ಲೀಗ್ ಕ್ರಿಕೆಟ್​ನತ್ತ ಮುಖ ಮಾಡಿರುವುದು ವಿಶೇಷ.

3 / 6
ಹಾಗೆಯೇ ಮುಂಬರುವ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ದಿನೇಶ್ ಕಾರ್ತಿಕ್ ಕಣಕ್ಕಿಳಿಯಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ಮಾಲೀಕತ್ವದ ಪಾರ್ಲ್ ರಾಯಲ್ಸ್ ಫ್ರಾಂಚೈಸಿಯು ಡಿಕೆಯನ್ನು ಖರೀದಿಸಿದ್ದಾರೆ. ಈ ಮೂಲಕ ವಿದೇಶಿ ಲೀಗ್​ನಲ್ಲೂ ಕಣಕ್ಕಿಳಿಯಲು ಆರ್​ಸಿಬಿ ತಂಡದ ಮಾಜಿ ಆಟಗಾರ ಸಜ್ಜಾಗಿದ್ದಾರೆ.

4 / 6
ಈಗಾಗಲೇ ಐಪಿಎಲ್​ಗೆ ನಿವೃತ್ತಿ ಘೋಷಿರುವ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಆರ್​ಸಿಬಿ ತಂಡದ ಮೆಂಟರ್​ ಹುದ್ದೆಯನ್ನು ಸಹ ಅಲಂಕರಿಸಲಿದ್ದಾರೆ. ಇತ್ತ ಐಪಿಎಲ್​ಗೆ ಗುಡ್ ಬೈ ಹೇಳಿರುವ ದಿನೇಶ್ ಕಾರ್ತಿಕ್ ಇದೀಗ ವಿವಿಧ ಲೀಗ್​ನತ್ತ ಮುಖ ಮಾಡಿರುವುದು ವಿಶೇಷ.

5 / 6
ಅಂದಹಾಗೆ 17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್​, ಗುಜರಾತ್ ಲಯನ್ಸ್ (ಈಗಿಲ್ಲ), ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರ ಆಡಿದ್ದರು. ಇದೀಗ ಲೆಜೆಂಡ್ಸ್ ಲೀಗ್​ನಲ್ಲಿ ಸದರ್ನ್​ ಸೂಪರ್ ಸ್ಟಾರ್ಸ್​ ಹಾಗೂ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

6 / 6
Follow Us
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ

ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!

ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ

‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು

ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?

ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!

ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ

ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?

ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು

Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..!