AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡದಿಂದ ಗ್ರೀನ್​ಗೆ ಗೇಟ್​ ಪಾಸ್..!

IPL 2025: ಆರ್​ಸಿಬಿ ತಂಡದ ಸ್ಟಾರ್ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಮುಂದಿನ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಸೊಂಟದ ನೋವಿನ ಕಾರಣ ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಗ್ರೀನ್ ಐಪಿಎಲ್​ನ 18ನೇ ಆವೃತ್ತಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Oct 15, 2024 | 8:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರೀನ್ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.

1 / 5
ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯ ಎಂದಿದ್ದಾರೆ. ಈ ಸರ್ಜರಿಯ ಕಾರಣ ಗ್ರೀನ್ ಮುಂದಿನ 6 ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.

2 / 5
ಅಂದರೆ ಮುಂದಿನ ಮೇ ತಿಂಗಳವರೆಗೆ ಕ್ಯಾಮರೋನ್ ಗ್ರೀನ್​ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ. ಇತ್ತ ಐಪಿಎಲ್ ಸೀಸನ್-18 ಮಾರ್ಚ್ ಮತ್ತು ಮೇ ತಿಂಗಳ ನಡುವೆ ನಡೆಯಲಿದೆ. ಈ ಅವಧಿಯಲ್ಲಿ ಅಲಭ್ಯರಾಗುವ ಕಾರಣ ಆರ್​ಸಿಬಿ ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಮುಂದಿನ ಸೀಸನ್​ನಲ್ಲಿ ಆರ್​ಸಿಬಿ ಪಡೆಯಲ್ಲಿ ಆಸ್ಟ್ರೇಲಿಯನ್ ಆಲ್​ರೌಂಡರ್ ಕಾಣಿಸಿಕೊಳ್ಳುವುದಿಲ್ಲ.

3 / 5
ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 17.5 ಕೋಟಿ ರೂ.ಗೆ ಟ್ರೇಡ್ ಮಾಡಿಕೊಂಡಿತ್ತು. ಅದರಂತೆ ಐಪಿಎಲ್ 2024 ರಲ್ಲಿ ಆರ್​ಸಿಬಿ ಪರ 13 ಪಂದ್ಯಗಳನ್ನಾಡಿದ್ದ ಗ್ರೀನ್ 255 ರನ್ ಕಲೆಹಾಕಿದ್ದರು. ಅಲ್ಲದೆ 10 ವಿಕೆಟ್ ಪಡೆದಿದ್ದರು.

4 / 5
ಹೀಗಾಗಿಯೇ ಈ ಬಾರಿಯ ಐಪಿಎಲ್​ಗೂ ಮುನ್ನ ಆಸ್ಟ್ರೇಲಿಯನ್ ಆಲ್​ರೌಂಡರ್​ನನ್ನು ಆರ್​ಸಿಬಿ ರಿಟೈನ್ ಮಾಡಿಕೊಳ್ಳಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಕಾರಣ ಕ್ಯಾಮರೋನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಬಹುತೇಕ ಖಚಿತವಾಗಿದೆ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?