IPL 2025: RCB ತಂಡದಿಂದ ಗ್ರೀನ್ಗೆ ಗೇಟ್ ಪಾಸ್..!
IPL 2025: ಆರ್ಸಿಬಿ ತಂಡದ ಸ್ಟಾರ್ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಮುಂದಿನ ಐಪಿಎಲ್ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಸೊಂಟದ ನೋವಿನ ಕಾರಣ ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಗ್ರೀನ್ ಐಪಿಎಲ್ನ 18ನೇ ಆವೃತ್ತಿಗೆ ಅಲಭ್ಯರಾಗುವ ಸಾಧ್ಯತೆಯಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಸೊಂಟದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರೀನ್ ಅವರನ್ನು ಆರ್ಸಿಬಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ.
2 / 5
ಕ್ಯಾಮರೋನ್ ಗ್ರೀನ್ ಅವರ ಸೊಂಟದ ಬೆನ್ನುಮೂಳೆಯಲ್ಲಿ ಒತ್ತಡದಿಂದಾಗಿ ಸಣ್ಣ ಬಿರುಕು ಉಂಟಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯ ಎಂದಿದ್ದಾರೆ. ಈ ಸರ್ಜರಿಯ ಕಾರಣ ಗ್ರೀನ್ ಮುಂದಿನ 6 ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ.
3 / 5
ಅಂದರೆ ಮುಂದಿನ ಮೇ ತಿಂಗಳವರೆಗೆ ಕ್ಯಾಮರೋನ್ ಗ್ರೀನ್ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ. ಇತ್ತ ಐಪಿಎಲ್ ಸೀಸನ್-18 ಮಾರ್ಚ್ ಮತ್ತು ಮೇ ತಿಂಗಳ ನಡುವೆ ನಡೆಯಲಿದೆ. ಈ ಅವಧಿಯಲ್ಲಿ ಅಲಭ್ಯರಾಗುವ ಕಾರಣ ಆರ್ಸಿಬಿ ಫ್ರಾಂಚೈಸಿ ಕ್ಯಾಮರೋನ್ ಗ್ರೀನ್ ಅವರನ್ನು ರಿಟೈನ್ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಹೀಗಾಗಿ ಮುಂದಿನ ಸೀಸನ್ನಲ್ಲಿ ಆರ್ಸಿಬಿ ಪಡೆಯಲ್ಲಿ ಆಸ್ಟ್ರೇಲಿಯನ್ ಆಲ್ರೌಂಡರ್ ಕಾಣಿಸಿಕೊಳ್ಳುವುದಿಲ್ಲ.
4 / 5
ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕ್ಯಾಮರೋನ್ ಗ್ರೀನ್ ಅವರನ್ನು ಕಳೆದ ಸೀಸನ್ನಲ್ಲಿ ಆರ್ಸಿಬಿ 17.5 ಕೋಟಿ ರೂ.ಗೆ ಟ್ರೇಡ್ ಮಾಡಿಕೊಂಡಿತ್ತು. ಅದರಂತೆ ಐಪಿಎಲ್ 2024 ರಲ್ಲಿ ಆರ್ಸಿಬಿ ಪರ 13 ಪಂದ್ಯಗಳನ್ನಾಡಿದ್ದ ಗ್ರೀನ್ 255 ರನ್ ಕಲೆಹಾಕಿದ್ದರು. ಅಲ್ಲದೆ 10 ವಿಕೆಟ್ ಪಡೆದಿದ್ದರು.
5 / 5
ಹೀಗಾಗಿಯೇ ಈ ಬಾರಿಯ ಐಪಿಎಲ್ಗೂ ಮುನ್ನ ಆಸ್ಟ್ರೇಲಿಯನ್ ಆಲ್ರೌಂಡರ್ನನ್ನು ಆರ್ಸಿಬಿ ರಿಟೈನ್ ಮಾಡಿಕೊಳ್ಳಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಕಾರಣ ಕ್ಯಾಮರೋನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಬಹುತೇಕ ಖಚಿತವಾಗಿದೆ.