- Kannada News Photo gallery Cricket photos IPL 2025 RCB Captain: RCB to announced captain for IPL 2025
ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ
IPL 2025 RCB Captain: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಬಾರಿ ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್ಸಿಬಿ ತಂಡ ಕಣಕ್ಕಿಳಿಯಲಿದೆ. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು.
Updated on:Feb 13, 2025 | 11:59 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್ಗೆ ವಹಿಸಲಾಗಿದೆ.

ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ 31 ವರ್ಷದ ಪಾಟಿದಾರ್ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಫಾಫ್ ಡುಪ್ಲೆಸಿಸ್ ಕಾಣಿಸಿಕೊಂಡಿದ್ದರು. 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.

ಇನ್ನು ಮೆಗಾ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತವಾಗಿತ್ತು. ಹೀಗಾಗಿ ವಿರಾಟ್ ಕೊಹ್ಲಿ ನಾಯಕರಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಲಿಯಾಮ್ ಲಿವಿಂಗ್ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ.
Published On - 11:55 am, Thu, 13 February 25



















