ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ

Updated on: Feb 13, 2025 | 11:59 AM

IPL 2025 RCB Captain: ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಬಾರಿ ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್​ಸಿಬಿ ತಂಡ ಕಣಕ್ಕಿಳಿಯಲಿದೆ. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್​ಗೆ ವಹಿಸಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್​ಗೆ ವಹಿಸಲಾಗಿದೆ.

2 / 5

ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ 31 ವರ್ಷದ ಪಾಟಿದಾರ್​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

3 / 5

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಫಾಫ್ ಡುಪ್ಲೆಸಿಸ್ ಕಾಣಿಸಿಕೊಂಡಿದ್ದರು. 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್​ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.

4 / 5

ಇನ್ನು ಮೆಗಾ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತವಾಗಿತ್ತು. ಹೀಗಾಗಿ ವಿರಾಟ್ ಕೊಹ್ಲಿ ನಾಯಕರಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿದೆ.

5 / 5

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

Published On - 11:55 am, Thu, 13 February 25

Loading...
Unable to load recommendations.
Follow Us