IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB
IPL 2025 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 169 ರನ್ ಕಲೆಹಾಕಿದರೆ, ಗುಜರಾತ್ ಟೈಟಾನ್ಸ್ ತಂಡವು ಈ ಗುರಿಯನ್ನು ಕೇವಲ 17.5 ಓವರ್ಗಳಲ್ಲಿ ಚೇಸ್ ಮಾಡಿದೆ.
Updated on: Apr 03, 2025 | 7:55 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಮೊದಲ ಸೋಲುಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅನಗತ್ಯ ದಾಖಲೆಯೊಂದನ್ನು ಬರೆದಿದೆ. ಅದು ಕೂಡ ತವರಿನಲ್ಲಿ ಹೀನಾಯವಾಗಿ ಸೋಲುವ ಮೂಲಕ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್ಗಳಲ್ಲಿ 170 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

ಈ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿಗೆ ಹೀನಾಯ ದಾಖಲೆಯೊಂದು ಸೇರ್ಪಡೆಯಾಗಿದೆ. ಅದು ಸಹ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನು ಸೋತ ದಾಖಲೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತಿರುವ ತಂಡಗಳ ಪೈಕಿ ಆರ್ಸಿಬಿ ಅಗ್ರಸ್ಥಾನಕ್ಕೇರಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 92 ಪಂದ್ಯಗಳನ್ನಾಡಿದೆ. ಈ ವೇಳೆ ಆರ್ಸಿಬಿ ತಂಡ ಬರೋಬ್ಬರಿ 44 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನು ಸೋತ ತಂಡವೆಂಬ ಡೆಲ್ಲಿ ಕ್ಯಾಪಿಟಲ್ಸ್ ತಂಡದ ದಾಖಲೆಯನ್ನು ಸರಿಗಟ್ಟಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ 82 ಪಂದ್ಯಗಳನ್ನಾಡಿದೆ. ಈ ವೇಳೆ ಅವರು ಸಹ 44 ಪಂದ್ಯಗಳಲ್ಲಿ ಪರಾಜಯಗೊಂಡಿದೆ. ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ 92 ಪಂದ್ಯಗಳಲ್ಲಿ 44 ಮ್ಯಾಚ್ಗಳಲ್ಲಿ ಸೋಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ನಲ್ಲಿ ಅನಗತ್ಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ.



















