IPL 2025: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

|

Updated on: Apr 03, 2025 | 7:55 AM

IPL 2025 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​​ನ (ಐಪಿಎಲ್ 2025) 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 169 ರನ್ ಕಲೆಹಾಕಿದರೆ, ಗುಜರಾತ್ ಟೈಟಾನ್ಸ್ ತಂಡವು ಈ ಗುರಿಯನ್ನು ಕೇವಲ 17.5 ಓವರ್​ಗಳಲ್ಲಿ ಚೇಸ್ ಮಾಡಿದೆ.

1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಮೊದಲ ಸೋಲುಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅನಗತ್ಯ ದಾಖಲೆಯೊಂದನ್ನು ಬರೆದಿದೆ. ಅದು ಕೂಡ ತವರಿನಲ್ಲಿ ಹೀನಾಯವಾಗಿ ಸೋಲುವ ಮೂಲಕ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್​​ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

2 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 17.5 ಓವರ್​ಗಳಲ್ಲಿ 170 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

3 / 5
ಈ ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿಗೆ ಹೀನಾಯ ದಾಖಲೆಯೊಂದು ಸೇರ್ಪಡೆಯಾಗಿದೆ. ಅದು ಸಹ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನು ಸೋತ ದಾಖಲೆ. ಅಂದರೆ ಐಪಿಎಲ್ ಇತಿಹಾಸದಲ್ಲಿ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತಿರುವ ತಂಡಗಳ ಪೈಕಿ ಆರ್​ಸಿಬಿ ಅಗ್ರಸ್ಥಾನಕ್ಕೇರಿದೆ.

4 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 92 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ತಂಡ ಬರೋಬ್ಬರಿ 44 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳನ್ನು ಸೋತ ತಂಡವೆಂಬ ಡೆಲ್ಲಿ ಕ್ಯಾಪಿಟಲ್ಸ್ ತಂಡದ ದಾಖಲೆಯನ್ನು ಸರಿಗಟ್ಟಿದೆ.

5 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ 82 ಪಂದ್ಯಗಳನ್ನಾಡಿದೆ. ಈ ವೇಳೆ ಅವರು ಸಹ 44 ಪಂದ್ಯಗಳಲ್ಲಿ ಪರಾಜಯಗೊಂಡಿದೆ. ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ 92 ಪಂದ್ಯಗಳಲ್ಲಿ 44 ಮ್ಯಾಚ್​ಗಳಲ್ಲಿ ಸೋಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್​ನಲ್ಲಿ ಅನಗತ್ಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ.