AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡದ ಮುಂದಿನ ಗುರಿ 17+4

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ವೇಳೆ ಆರ್​ಸಿಬಿ ತಂಡವು 8 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಮಳೆಯ ಕಾರಣ ರದ್ದಾಗಿದ್ದರಿಂದ 1 ಅಂಕವನ್ನು ಪಡೆದುಕೊಂಡಿದೆ. ಈ ಮೂಲಕ ಒಟ್ಟು 17 ಅಂಕಗಳನ್ನು ಕಲೆಹಾಕಿರುವ ಆರ್​ಸಿಬಿ ಮುಂದಿನ 2 ಪಂದ್ಯಗಳ ಮೂಲಕ 4 ಅಂಕಗಳನ್ನು ಪಡೆಯಬಹುದು.

ಝಾಹಿರ್ ಯೂಸುಫ್
|

Updated on: May 19, 2025 | 11:09 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಆಡಿರುವ 12 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಆರ್​ಸಿಬಿ ಸದ್ಯ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ರಾಯಲ್ ಪಡೆಗೆ ಇನ್ನೂ 2 ಪಂದ್ಯಗಳು ಬಾಕಿಯಿದ್ದು, ಈ ಮೂಲಕ ಆರ್​ಸಿಬಿ ಹೆಚ್ಚುವರಿ 4 ಅಂಕಗಳನ್ನು ಕಲೆಹಾಕಬಹುದು.

1 / 7
ಅಂದರೆ 17 ಅಂಕಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಜಯ  ಸಾಧಿಸಿದರೆ, ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶವನ್ನು ಎದುರು ನೋಡಬಹುದು.

2 / 7
ಇಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದರಿಂದ ಸಿಗುವ ಲಾಭವೆಂದರೆ, ಸೋತರೂ ಮತ್ತೊಂದು ಪಂದ್ಯವಿರುವುದು. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಅಂಕ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನಗಳಲ್ಲಿರುವ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ.

3 / 7
ಇನ್ನು ಮೊದಲ ಕ್ವಾಲಿಫೈಯರ್​ನಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳುವುದಿಲ್ಲ. ಬದಲಾಗಿ ದ್ವಿತೀಯ ಕ್ವಾಲಿಫೈಯರ್ ಪಂದ್ಯವಾಡಲು ಅವಕಾಶ ಇರಲಿದೆ. ಅದರಂತೆ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದೊಡನೆ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್​ಗೇರಲು ಅವಕಾಶ ಸಿಗಲಿದೆ.

4 / 7
ಪ್ರಸ್ತುತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 22 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಇದೇ ವೇಳೆ ಆರ್​ಸಿಬಿ ತಂಡವು ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಜಯಳಿಸಿದರೆ ಒಟ್ಟು 21 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.

5 / 7
ಆದರೆ ಅತ್ತ ಪಂಜಾಬ್ ಕಿಂಗ್ಸ್ ತಂಡಕ್ಕೂ ಇನ್ನೂ ಎರಡು ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ ಪಂಜಾಬ್ ಪಡೆ ಕೂಡ ಒಟ್ಟು 21 ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಉತ್ತಮ ನೆಟ್ ರನ್ ರೇಟ್ ಪಡೆದರೆ, ಪಂಜಾಬ್ ಕಿಂಗ್ಸ್ ತಂಡವು ಆರ್​ಸಿಬಿ ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಬಹುದು.

6 / 7
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಕ್ವಾಲಿಫೈಯರ್​ ಪಂದ್ಯವಾಡಲು ಅರ್ಹತೆ ಪಡೆಯಬೇಕಿದ್ದರೆ, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ  ಭರ್ಜರಿ ಜಯಗಳಿಸಬೇಕು. ಈ ಮೂಲಕ ಉತ್ತಮ ನೆಟ್ ರನ್ ರೇಟ್​ನೊಂದಿಗೆ 21 ಅಂಕಗಳನ್ನು ಗಳಿಸಿ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಬಹುದು. ಅಲ್ಲದೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದು ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ 2 ಪಂದ್ಯಗಳೂ ಕೂಡ ತುಂಬಾ ಮಹತ್ವದ್ದು ಎನ್ನಬಹುದು.

7 / 7
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ