- Kannada News Photo gallery Cricket photos IPL 2025 RCB full schedule: Royal Challengers Bengaluru fixtures
IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB
IPL 2025 RCB full schedule: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಆರ್ಸಿಬಿ ತಂಡವು ನಾಲ್ಕು ತಣಡಗಳ ವಿರುದ್ಧ ಏಕೈಕ ಪಂದ್ಯಗಳನ್ನಾಡಲಿದೆ. ಲೀಗ್ ಹಂತದಲ್ಲಿ ನಡೆಯಲಿರುವ ಈ ಸುತ್ತಿನಲ್ಲಿ ಆರ್ಸಿಬಿ ಐದು ತಂಡಗಳ ವಿರುದ್ಧ ತಲಾ 2 ಮ್ಯಾಚ್ಗಳಲ್ಲಿ ಕಣಕ್ಕಿಳಿದರೆ, ಉಳಿದ ನಾಲ್ಕು ತಂಡಗಳ ವಿರುದ್ಧ ಒಂದೊಂದು ಪಂದ್ಯದಲ್ಲಿ ಮಾತ್ರ ಸೆಣಸಲಿದೆ.
Updated on:Feb 17, 2025 | 9:07 AM

ಇಂಡಿಯನ್ ಪ್ರೀಮಿಯರ್ ಲೀಗ್ನ ಸೀಸನ್-18ರ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.

ವಿಶೇಷ ಎಂದರೆ ಈ ಬಾರಿಯ ಟೂರ್ನಿಗಾಗಿ 10 ತಂಡಗಳನ್ನು ತಲಾ 5 ತಂಡಗಳಂತೆ ಎರಡು ಗ್ರೂಪ್ಗಳಲ್ಲಿ ವಿಂಗಡಿಸಲಾಗಿದೆ. ಅದರಂತೆ ಈ ಬಾರಿ ಪ್ರತಿ ತಂಡಗಳು ತನ್ನದೇ ಗ್ರೂಪ್ನಲ್ಲಿರುವ 4 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು, ಮತ್ತೊಂದು ಗ್ರೂಪ್ನಲ್ಲಿರುವ 4 ತಂಡಗಳ ವಿರುದ್ದ ತಲಾ ಒಂದು ಪಂದ್ಯ ಹಾಗೂ ಒಂದು ತಂಡದ ವಿರುದ್ದ 2 ಪಂದ್ಯಗಳನ್ನಾಡಲಿದೆ.

ಹೀಗಾಗಿ ಆರ್ಸಿಬಿ ಸೇರಿದಂತೆ ಎಲ್ಲಾ ತಂಡಗಳು 4 ಟೀಮ್ಗಳ ವಿರುದ್ಧ ಏಕೈಕ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಏಕೈಕ ಪಂದ್ಯಗಳನ್ನಾಡಲಿರುವ ನಾಲ್ಕು ತಂಡಗಳಾವುವು ಎಂದು ನೋಡುವುದಾದರೆ...

RCB vs GT: ಆರ್ಸಿಬಿ ತಂಡವು ಈ ಬಾರಿ ಗುಜರಾತ್ ಜೈಂಟ್ಸ್ ತಂಡವನ್ನು ಏಕೈಕ ಬಾರಿ ಎದುರಿಸಲಿದೆ. ಈ ಪಂದ್ಯವು ಏಪ್ರಿಲ್ 2 ರಂದು ನಡೆಯಲಿದ್ದು, ಈ ಮ್ಯಾಚ್ಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

RCB vs MI: ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಈ ಬಾರಿ ಆರ್ಸಿಬಿ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಲಿದೆ. ಏಪ್ರಿಲ್ 7 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.

RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸಹ ಏಕೈಕ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯವು ಮೇ 9 ರಂದು ಲಕ್ನೋದಲ್ಲಿ ನಡೆಯಲಿದೆ.

RCB vs SRH: ಈ ಬಾರಿ ಆರ್ಸಿಬಿ ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸಹ ಒಂದು ಪಂದ್ಯವನ್ನು ಮಾತ್ರ ಆಡಲಿದೆ. ಮೇ 13 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಈ ಪಂದ್ಯದಲ್ಲಿ ರನ್ ಮಳೆಯನ್ನು ನಿರೀಕ್ಷಿಸಬಹುದು.

ಇನ್ನುಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ ತಂಡವು ತಲಾ 2 ಪಂದ್ಯಗಳನ್ನಾಡಲಿದೆ. ಈ ಮೂಲಕ ಲೀಗ್ ಹಂತದಲ್ಲಿ ಒಟ್ಟು 14 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ.
Published On - 9:04 am, Mon, 17 February 25



















