AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ RCB

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 34ನೇ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ನಿಗದಿತ 14 ಓವರ್​ಗಳಲ್ಲಿ 95 ರನ್​ಗಳಿಸಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್​ 12.1 ಓವರ್​ಗಳಲ್ಲಿ ಗೆಲುವಿನ ಗುರಿ ಮುಟ್ಟಿದೆ.

ಝಾಹಿರ್ ಯೂಸುಫ್
|

Updated on:Apr 19, 2025 | 8:32 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಅದರಲ್ಲೂ ಬ್ಯಾಟ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆರ್​ಸಿಬಿ ಒಂದು ಹಂತದಲ್ಲಿ 63 ರನ್​ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಟಿಮ್ ಡೇವಿಡ್ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್​ಸಿಬಿ ತಂಡವು ನಿಗದಿತ 14 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು.

2 / 6
96 ರನ್​ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿದರೂ, ಆ ಬಳಿಕ ಚೇತರಿಸಿಕೊಂಡಿತು. ಇದರ ನಡುವೆ ಕಣಕ್ಕಿಳಿದ ನೆಹಾಲ್ ವಧೇರಾ ಅತ್ಯುತ್ತಮ ಬ್ಯಾಟಿಂಗ್​ನೊಂದಿಗೆ ಅಜೇಯ 33 ರನ್ ಬಾರಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ಪಡೆ 12.1 ಓವರ್​ಗಳಲ್ಲಿ 98 ರನ್ ಬಾರಿಸಿ 5 ವಿಕೆಟ್​ಗಳ ಗೆಲುವು ದಾಖಲಿಸಿತು.

3 / 6
ಈ ಸೋಲಿನೊಂದಿಗೆ ಐಪಿಎಲ್​ ಇತಿಹಾಸದಲ್ಲೇ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳಲ್ಲಿ ಸೋತ ತಂಡವೆಂಬ ಅಪಕೀರ್ತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಇಂತಹದೊಂದು ಹೀನಾಯ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೆಸರಿನಲ್ಲಿತ್ತು.

4 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ತವರು ಮೈದಾನ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಈವರೆಗೆ 84 ಪಂದ್ಯಗಳನ್ನಾಡಿದೆ. ಈ ವೇಳೆ  DC ಪಡೆ 45 ಪಂದ್ಯಗಳಲ್ಲಿ ಪರಾಜಯಗೊಂಡಿದೆ. ಈ ಮೂಲಕ ಐಪಿಎಲ್​ನಲ್ಲಿ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತ ತಂಡವೆಂಬ ಅನಗತ್ಯ ದಾಖಲೆಯೊಂದು ಡೆಲ್ಲಿ ಕ್ಯಾಪಿಟಲ್ಸ್ ನಿರ್ಮಿಸಿತ್ತು.

5 / 6
ಇದೀಗ ಈ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುರಿದೆ. ಆರ್​ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 94 ಪಂದ್ಯಗಳನ್ನು ಆಡಿದೆ. ಈ ವೇಳೆ ಬರೋಬ್ಬರಿ 46 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತ ಅಪಕೀರ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿದೆ.

6 / 6

Published On - 8:30 am, Sat, 19 April 25

Follow Us
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್

ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ

ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!

ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ

ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್

ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ

ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ

ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?

ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?