AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡದ ಮುಂದಿದೆ 3 ಕಠಿಣ ಸವಾಲುಗಳು

IPL 2025 RCB Schedule: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) 54 ಪಂದ್ಯಗಳು ಪೂರ್ಣಗೊಂಡಿದ್ದು, ಈ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 11 ಪಂದ್ಯಗಳನ್ನಾಡಿದೆ. ಈ ಪಂದ್ಯಗಳ ಮೂಲಕ ಆರ್​ಸಿಬಿ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: May 05, 2025 | 2:11 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈವರೆಗೆ 11 ಪಂದ್ಯಗಳನ್ನಾಡಿದೆ. ಈ ಹನ್ನೊಂದು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡ 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಮೂರು ಮ್ಯಾಚ್​ಗಳಲ್ಲಿ ಮುಗ್ಗರಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

1 / 5
ಇದಾಗ್ಯೂ ಆರ್​ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿಲ್ಲ. ಹೀಗಾಗಿ ರಾಯಲ್ ಪಡೆಯ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮಹತ್ವದ್ದು. ಈ ಮೂರು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವು 2 ಗೆಲುವು ದಾಖಲಿಸಿದರೆ ಅಧಿಕೃತವಾಗಿ ಪ್ಲೇಆಫ್​ ಹಂತಕ್ಕೇರಲಿದೆ. ಹಾಗಿದ್ರೆ ಆರ್​ಸಿಬಿ ತಂಡದ ಮುಂದಿನ ಮೂರು ಎದುರಾಳಿಗಳು ಯಾರೆಂದು ನೋಡೋಣ...

2 / 5
RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 9 ರಂದು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎಲ್​ಎಸ್​ಜಿ ತಂಡ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ಇತ್ತ ಆರ್​ಸಿಬಿ ತಂಡ ಗೆದ್ದರೆ ಒಟ್ಟು ಪಾಯಿಂಟ್ಸ್ 18 ಆಗಲಿದೆ.

3 / 5
RCB vs SRH: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ನಡುವಣ ಪಂಧ್ಯವು 13 ರಂದು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ತನ್ನ ಪ್ಲೇಆಫ್ ಪ್ರವೇಶವನ್ನು ಅಧಿಕೃತಗೊಳಿಸಬಹುದು.

4 / 5
RCB vs KKR: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೊನೆಯ ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ. ಮೇ 17 ರಂದು ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ತಂಡವು ತನ್ನ ಲೀಗ್ ಹಂತದ ಪಂದ್ಯಗಳನ್ನು ಮುಗಿಸಲಿದೆ. ಒಂದು ವೇಳೆ ಈ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 22 ಆಗಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ