IPL 2025: RCB ತಂಡದ ಮುಂದಿದೆ 3 ಕಠಿಣ ಸವಾಲುಗಳು
IPL 2025 RCB Schedule: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2025) 54 ಪಂದ್ಯಗಳು ಪೂರ್ಣಗೊಂಡಿದ್ದು, ಈ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 11 ಪಂದ್ಯಗಳನ್ನಾಡಿದೆ. ಈ ಪಂದ್ಯಗಳ ಮೂಲಕ ಆರ್ಸಿಬಿ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ.
Updated on: May 05, 2025 | 2:11 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈವರೆಗೆ 11 ಪಂದ್ಯಗಳನ್ನಾಡಿದೆ. ಈ ಹನ್ನೊಂದು ಮ್ಯಾಚ್ಗಳಲ್ಲಿ ಆರ್ಸಿಬಿ ತಂಡ 8 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಮೂರು ಮ್ಯಾಚ್ಗಳಲ್ಲಿ ಮುಗ್ಗರಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಇದಾಗ್ಯೂ ಆರ್ಸಿಬಿ ತಂಡವು ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ. ಹೀಗಾಗಿ ರಾಯಲ್ ಪಡೆಯ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮಹತ್ವದ್ದು. ಈ ಮೂರು ಮ್ಯಾಚ್ಗಳಲ್ಲಿ ಆರ್ಸಿಬಿ ತಂಡವು 2 ಗೆಲುವು ದಾಖಲಿಸಿದರೆ ಅಧಿಕೃತವಾಗಿ ಪ್ಲೇಆಫ್ ಹಂತಕ್ಕೇರಲಿದೆ. ಹಾಗಿದ್ರೆ ಆರ್ಸಿಬಿ ತಂಡದ ಮುಂದಿನ ಮೂರು ಎದುರಾಳಿಗಳು ಯಾರೆಂದು ನೋಡೋಣ...

RCB vs LSG: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 9 ರಂದು ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎಲ್ಎಸ್ಜಿ ತಂಡ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ಇತ್ತ ಆರ್ಸಿಬಿ ತಂಡ ಗೆದ್ದರೆ ಒಟ್ಟು ಪಾಯಿಂಟ್ಸ್ 18 ಆಗಲಿದೆ.

RCB vs SRH: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವಣ ಪಂಧ್ಯವು 13 ರಂದು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ತನ್ನ ಪ್ಲೇಆಫ್ ಪ್ರವೇಶವನ್ನು ಅಧಿಕೃತಗೊಳಿಸಬಹುದು.

RCB vs KKR: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೊನೆಯ ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ. ಮೇ 17 ರಂದು ನಡೆಯಲಿರುವ ಈ ಪಂದ್ಯದ ಮೂಲಕ ಆರ್ಸಿಬಿ ತಂಡವು ತನ್ನ ಲೀಗ್ ಹಂತದ ಪಂದ್ಯಗಳನ್ನು ಮುಗಿಸಲಿದೆ. ಒಂದು ವೇಳೆ ಈ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಆರ್ಸಿಬಿ ತಂಡದ ಒಟ್ಟು ಪಾಯಿಂಟ್ಸ್ 22 ಆಗಲಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.
