- Kannada News Photo gallery Cricket photos IPL 2025: RCB Players Ruled Our From CHAMPIONS TROPHY 2025
RCB ತಂಡಕ್ಕೆ ಬಿಗ್ ಶಾಕ್: ಇಬ್ಬರು ಆಟಗಾರರು ಔಟ್..!
CHAMPIONS TROPHY 2025-IPL 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮಾರ್ಚ್ 21 ರಿಂದ ಆರಂಭವಾಗಲಿದೆ. ಇದೀಗ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಆರ್ಸಿಬಿ ಆಟಗಾರರು ಐಪಿಎಲ್ನಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬುದೇ ಪ್ರಶ್ನೆ.
Updated on: Feb 10, 2025 | 12:04 PM

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಈ ಟೂರ್ನಿಯ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಶುರುವಾಗಲಿದೆ. ಆದರೆ ಇದೀಗ ಚಾಂಪಿಯನ್ಸ್ ಟ್ರೋಫಿಗೆ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ. ಈ ಇಬ್ಬರು ಆಟಗಾರರು ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ತಂಡದ ಕಣಕ್ಕಿಳಿಯಬೇಕಾದ ಪ್ಲೇಯರ್ಸ್.

ಆರ್ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ತಂಡದ ವೇಗಿ ಜೋಶ್ ಹ್ಯಾಝಲ್ವುಡ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಕಣಕಾಲಿನ ಹಿ೦ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಹ್ಯಾಝಲ್ವುಡ್ ಫಿಟ್ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ.

ಮತ್ತೊಂದೆಡೆ ಇಂಗ್ಲೆಂಡ್ ತಂಡದ ಯುವ ಆಲ್ರೌಂಡರ್ ಜೇಕಬ್ ಬೆಥೆಲ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಬೆಥೆಲ್ ಭಾರತದ ವಿರುದ್ಧದ ಸರಣಿಗೆ ಹಾಗೂ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

ಇದೀಗ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಈ ಇಬ್ಬರು ಆಟಗಾರರು ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಪರ ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ. ಏಕೆಂದರೆ ಐಸಿಸಿ ಟೂರ್ನಿಯಿಂದ ಹೊರಗುಳಿದಿರುವ ಕಾರಣ ಸಂಪೂರ್ಣ ಫಿಟ್ನೆಸ್ ಸಾಧಿಸದ ಹೊರತ ಐಪಿಎಲ್ ಆಡಲು ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅನುಮತಿ ನೀಡುವುದಿಲ್ಲ.

ಹೀಗಾಗಿ ಹ್ಯಾಝಲ್ವುಡ್ ಹಾಗೂ ಬೆಥೆಲ್ ಐಪಿಎಲ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕ್ಷೀಣಿಸಿದೆ. ಇದಾಗ್ಯೂ ಐಪಿಎಲ್ ಆರಂಭಕ್ಕೂ ಇನ್ನೂ ಒಂದು ತಿಂಗಳುಗಳ ಕಾಲಾವಕಾಶವಿದೆ. ಈ ಒಂದು ತಿಂಗಳ ಒಳಗೆ ಇಬ್ಬರು ಆಟಗಾರರು ಆಟಗಾರರು ಸಂಪೂರ್ಣ ಫಿಟ್ನೆಸ್ ಸಾಧಿಸುವಲ್ಲಿ ಯಶಸ್ವಿಯಾದರೆ ಮಾತ್ರ RCB ಪರ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರರ ಮೊರೆ ಹೋಗಲಿದೆ.
























