CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

|

Updated on: Mar 29, 2025 | 9:54 AM

IPL 2025 CSK vs RCB: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ 8ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 196 ರನ್ ಕಲೆಹಾಕಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 146 ರನ್​ಗಳಿಸಿ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

1 / 5
IPL 2025: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನೊಂದಿಗೆ ಆರ್​ಸಿಬಿ ಪಡೆ ಐಪಿಎಲ್​ನಲ್ಲಿ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ಗೆಲುವುಗಳ ಮೂಲಕ ಎಂಬುದು ವಿಶೇಷ.

2 / 5
ಐಪಿಎಲ್​ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಿಎಸ್​ಕೆ ವಿರುದ್ಧ ಒಮ್ಮೆಯೂ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿರಲಿಲ್ಲ. ಅಂದರೆ ಕಳೆದ 17 ವರ್ಷಗಳಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದಂತಹ ಇತಿಹಾಸವೇ ಇರಲಿಲ್ಲ.

3 / 5
ಆದರೀಗ ಆರ್​ಸಿಬಿ ಪಡೆ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಸೀಸನ್​ನ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಆರ್​ಸಿಬಿ 27 ರನ್​ಗಳಿಂದ ಮಣಿಸಿತ್ತು. ಇದೀಗ ಈ ಬಾರಿಯ ಮೊದಲ ಪಂದ್ಯದಲ್ಲೇ ಸಿಎಸ್​ಕೆ ಪಡೆಯನ್ನು 50 ರನ್​ಗಳಿಂದ ಬಗ್ಗು ಬಡಿದಿದೆ.

4 / 5
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬ್ಯಾಕ್ ಟು ಬ್ಯಾಕ್ ಎರಡು ಗೆಲುವು ದಾಖಲಿಸಿದೆ. ಇನ್ನು ಉಭಯ ತಂಡಗಳು ಮೇ 3 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲೂ ಆರ್​ಸಿಬಿ ಜಯ ಸಾಧಿಸಿದರೆ, ಅದು ಸಹ ಇತಿಹಾಸ ಪುಟಕ್ಕೆ ಸೇರ್ಪಡೆಯಾಗಲಿದೆ.

5 / 5
ಒಟ್ಟಿನಲ್ಲಿ ಆರ್​ಸಿಬಿ ವಿರುದ್ಧ ಸದಾ ಮೇಲುಗೈ ಸಾಧಿಸುತ್ತಾ ಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೇ ಮೊದಲ ಬಾರಿಗೆ ಬೃಹತ್ ಅಂತರದಿಂದ ಗೆಲುವು ದಾಖಲಿಸಿದೆ. ಈ ಮೂಲಕ ಆರ್​ಸಿಬಿ ಪಡೆ ಈ ಬಾರಿ ಹೊಸ ಅಧ್ಯಾಯ ಬರೆಯುವ ಸೂಚನೆಯನ್ನಂತು ನೀಡಿದ್ದಾರೆ.