IPL 2025: RCB ತಂಡಕ್ಕೆ ಸ್ಫೋಟಕ ದಾಂಡಿಗ ಎಂಟ್ರಿ

Updated on: May 22, 2025 | 2:30 PM

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ ಪಂದ್ಯಕ್ಕೂ ಮುನ್ನ 2 ಬದಲಾವಣೆ ಮಾಡಿಕೊಂಡಿದೆ. ಅದರಂತೆ ಇದೀಗ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಹಾಗೂ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಎಂಟ್ರಿ ಕೊಟ್ಟಿದ್ದಾರೆ.

1 / 5
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಟಿಮ್ ಸೈಫರ್ಟ್ (Tim Seifert) ಎಂಟ್ರಿ ಕೊಟ್ಟಿದ್ದಾರೆ. ಆರ್​ಸಿಬಿ ತಂಡದ ಮುಂದಿನ ಪಂದ್ಯಗಳಿಂದ ಯುವ ದಾಂಡಿಗ ಜೇಕಬ್ ಬೆಥೆಲ್ ಹೊರಗುಳಿಯುವುದು ಖಚಿತವಾಗಿದೆ. ಹೀಗಾಗಿ ಬದಲಿ ಆಟಗಾರನಾಗಿ ಸೈಫರ್ಟ್ ಅವರನ್ನು ಆಯ್ಕೆ ಮಾಡಲಾಗಿದೆ.

2 / 5
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಆಯ್ಕೆ ಮಾಡಲಾದ ಇಂಗ್ಲೆಂಡ್ ತಂಡದಲ್ಲಿ ಜೇಕಬ್ ಬೆಥೆಲ್ ಸ್ಥಾನ ಪಡೆದಿದ್ದು, ಹೀಗಾಗಿ ಮೇ 26ರ ಬಳಿಕ ಅವರು ಇಂಗ್ಲೆಂಡ್​ಗೆ ಮರಳಲಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಬದಲಿಯಾಗಿ ಟಿಮ್ ಸೈಫರ್ಟ್ ಅವರನ್ನು ಆರ್​ಸಿಬಿ ಆಯ್ಕೆ ಮಾಡಿಕೊಂಡಿದೆ.

3 / 5
ಟಿಮ್ ಸೈಫರ್ಟ್​ ನ್ಯೂಝಿಲೆಂಡ್​ನ ವಿಕೆಟ್ ಕೀಪರ್ ಬ್ಯಾಟ್ಸ್​ಮನ್. ಕಿವೀಸ್ ಪರ ಈವರೆಗೆ 66 ಟಿ20 ಪಂದ್ಯಗಳನ್ನಾಡಿರುವ ಸೈಫರ್ಟ್ 63 ಇನಿಂಗ್ಸ್​ಗಳಿಂದ 1540 ರನ್ ಕಲೆಹಾಕಿದ್ದಾರೆ. ಇದರ ನಡುವೆ 10 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಟಿ20ಐ ಕ್ರಿಕೆಟ್​ನಲ್ಲಿ ಟಿಮ್ ಸೈಫರ್ಟ್ ಬ್ಯಾಟ್​ನಿಂದ ಈವರೆಗೆ 80 ಸಿಕ್ಸ್ ಹಾಗೂ 131 ಫೋರ್​ಗಳು ಮೂಡಿಬಂದಿವೆ.

4 / 5
ಸದ್ಯ ಆರ್​ಸಿಬಿ ತಂಡದ ಭಾಗವಾಗಿರುವ ಟಿಮ್ ಸೈಫರ್ಟ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 3 ಐಪಿಎಲ್ ಪಂದ್ಯಗಳನ್ನಾಡಿರುವ ಅವರು 26 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಈ ಬಾರಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬದಲಿ ಆಟಗಾರನಾಗಿ ಸ್ಥಾನ ಪಡೆಯುವಲ್ಲಿ ಕಿವೀಸ್ ದಾಂಡಿಗ ಯಶಸ್ವಿಯಾಗಿದ್ದಾರೆ.

5 / 5
ಅಂದಹಾಗೆ ಐಪಿಎಲ್ ಪ್ಲೇಆಫ್ ಪಂದ್ಯಗಳಿಗೂ ಮುನ್ನ ಇದು ಆರ್​ಸಿಬಿ ತಂಡದ 2ನೇ ರೀಪ್ಲೇಸ್​ಮೆಂಟ್. ಇದಕ್ಕೂ ಮುನ್ನ ಲುಂಗಿ ಎನ್​ಗಿಡಿ ಬದಲಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ. ಮುಂಬುರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಸಿದ್ಧತೆಗಾಗಿ ಎನ್​ಗಿಡಿ ಈ ವಾರ ಸೌತ್ ಆಫ್ರಿಕಾಗೆ ಮರಳಲಿದ್ದಾರೆ. ಹೀಗಾಗಿ ಎನ್​ಗಿಡಿ ಬದಲಿಗೆ ಆರ್​ಸಿಬಿ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ.

Published On - 2:05 pm, Thu, 22 May 25